ETV Bharat / bharat

ಗುಂಡಿನ ದಾಳಿ: ಇಬ್ಬರು ಕುಖ್ಯಾತ ರೌಡಿಗಳನ್ನು ಬೆನ್ನಟ್ಟಿ ಹಿಡಿದ ಪೊಲೀಸರು - ಗುಂಡಿನ ದಾಳಿ

ಇಬ್ಬರು ಕುಖ್ಯಾತ ರೌಡಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಮೊಹಾಲಿಯಲ್ಲಿ ನಡೆದಿದೆ.

two-miscreants-arrested-by-mohali-police
ಗುಂಡಿನ ದಾಳಿ : ಇಬ್ಬರು ಕುಖ್ಯಾತ ರೌಡಿಗಳನ್ನು ಬೆನ್ನಟ್ಟಿ ಹಿಡಿದ ಪೊಲೀಸರು
author img

By ETV Bharat Karnataka Team

Published : Dec 16, 2023, 10:56 PM IST

ಚಂಡೀಗಢ : ಇಬ್ಬರು ಕುಖ್ಯಾತ ರೌಡಿಗಳನ್ನು ಪೊಲೀಸರು ಬೆನ್ನಟ್ಟಿ ಹಿಡಿದಿರುವ ಘಟನೆ ಮೊಹಾಲಿಯಲ್ಲಿ ನಡೆದಿದೆ. ಕುಖ್ಯಾತ ರೌಡಿಶೀಟರ್​ ರಾಜಪುರ ನಿವಾಸಿ ಬದ್ಮಾಶ್ ಪ್ರಿನ್ಸ್​ ಹಾಗೂ​ ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ.

ಮೊಹಾಲಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಈ ಇಬ್ಬರು ದುಷ್ಕರ್ಮಿಗಳನ್ನು ಬೆನ್ನಟ್ಟಿದ್ದಾರೆ. ಬಳಿಕ ದುಷ್ಕರ್ಮಿಗಳಿದ್ದ ಕಾರನ್ನು ಅಟ್ಟಿಸಿಕೊಂಡು ಹೋದ ಪೊಲೀಸರು ದಾಸರ್ ಲಾಂಡ್ರನ್ ರಸ್ತೆಯಲ್ಲಿ ಅಡ್ಡಗಟ್ಟಿದ್ದಾರೆ. ಈ ವೇಳೆ ಪೊಲೀಸರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಈ ವೇಳೆ ಇಬ್ಬರ ನಡುವಿನ ಗುಂಡಿನ ಚಕಮಕಿಯಲ್ಲಿ ಬದ್ಮಾಶ್​ ಪ್ರಿನ್ಸ್​ ಮತ್ತು ಆತನ ಸಹಚರನಿಗೆ ಗಂಭೀರ ಗಾಯವಾಗಿದೆ. ತಕ್ಷಣ ಪೊಲೀಸರು ಬಂಧಿಸಿದ್ದು, ಬಳಿಕ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಂಧಿತ ಬದ್ಮಾಶ್​ ಹತ್ತಾರು ಪ್ರಕರಣದಲ್ಲಿ ಆರೋಪಿಯಾಗಿದ್ದು, ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.

ಈ ಬಗ್ಗೆ ಮಾಹಿತಿ ನೀಡಿದ ಪಂಜಾಬ್​ ಪೊಲೀಸ್​ ಅಧಿಕಾರಿ, ಮೊಹಾಲಿ ಪೊಲೀಸರು ಇಬ್ಬರು ಕುಖ್ಯಾತ ರೌಡಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಗುಂಡು ತಗುಲಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಹಲವು ಪ್ರಕರಣಗಳಿವೆ ಎಂದು ಹೇಳಿದರು.

ದರೋಡೆ, ಸುಲಿಗೆ ಪ್ರಕರಣದ ಆರೋಪಿ ಪ್ರಿನ್ಸ್​ : ಆರೋಪಿ ಪ್ರಿನ್ಸ್​ ವಿರುದ್ಧ ದರೋಡೆ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಕಾರು ಕಳ್ಳತನ ಮತ್ತು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಿನ್ಸ್​ಗಾಗಿ ಪೊಲೀಸರು ಕಳೆದ ಕೆಲವು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು ಎಂದು ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ.

ಗುಂಡಿನ ದಾಳಿಯಲ್ಲಿ ಇಬ್ಬರು ಗ್ಯಾಂಗ್​ಸ್ಟರ್​ ಸಾವು : ಕಳೆದ ನವೆಂಬರ್​ ತಿಂಗಳಲ್ಲಿ ಪಂಜಾಬ್​ನ ಲೂಧಿಯಾನದ ದೋರಾಹಾದಲ್ಲಿ ಪೊಲೀಸರು ಮತ್ತು ಗ್ಯಾಂಗ್​ಸ್ಟರ್​​​​ಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ, ಪೊಲೀಸರ ಗುಂಡಿನ ದಾಳಿಗೆ ಸಿಲುಕಿ ಇಬ್ಬರು ಗ್ಯಾಂಗ್​ಸ್ಟರ್​​​ಗಳು ಸಾವನ್ನಪ್ಪಿದ್ದರು. ಎನ್‌ಕೌಂಟರ್ ವೇಳೆ ಪೊಲೀಸ್ ಅಧಿಕಾರಿಯೂ ಗಾಯಗೊಂಡಿದ್ದರು.

ಉದ್ಯಮಿಯೊಬ್ಬರನ್ನು ಅಪಹರಿಸಿದ ಪ್ರಕರಣ ಮತ್ತು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳ ಪೈಕಿ ಐವರನ್ನು ಪೊಲೀಸರು ಬಂಧಿಸಿದ್ದರು. ಉಳಿದ ಇಬ್ಬರು ತಲೆ ಮರೆಸಿಕೊಂಡಿದ್ದರು. ಬಳಿಕ ದೋರಾಹಾದ ಟಿಬ್ಬಾ ಬ್ರಿಡ್ಜ್​ ಎಂಬಲ್ಲಿ ಆರೋಪಿಗಳು ಇರುವುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಸಂಬಂಧ ಸ್ಥಳಕ್ಕೆ ತೆರಳಿ ಪೊಲೀಸರು ಆರೋಪಿಗಳನ್ನು ಸುತ್ತುವರೆದಿದ್ದರು.

ಈ ಬಗ್ಗೆ ತಿಳಿದ ಆರೋಪಿಗಳು ಏಕಾಏಕಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳು ಸಾವನ್ನಪ್ಪಿದ್ದರು. ಗುಂಡಿನ ಚಕಮಕಿಯಲ್ಲಿ ಪೊಲೀಸ್​ ಅಧಿಕಾರಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ : ಒಂದೇ ಕುಟುಂಬದ 6 ಜನರ ಮೇಲೆ ಮನಬಂದಂತೆ ಗುಂಡು ಹಾರಿಸಿದ ಭಗ್ನಪ್ರೇಮಿ; ಯುವತಿ ಸೇರಿ ಮೂವರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.