ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬುದ್ಗಾಮ್ ಜಿಲ್ಲೆಯಲ್ಲಿ ಗುರುವಾರ ಸಂಜೆ ನಡೆದ ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮ್ಮು ಕಾಶ್ಮೀರಕ್ಕೆ ಇಬ್ಬರೂ ವಲಸೆ ಕಾರ್ಮಿಕರು ಎಂದು ತಿಳಿದುಬಂದಿದೆ.
ಇಲ್ಲಿನ ಮಗ್ರೇಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಏಕಾಏಕಿ ಗುಂಡಿನ ಮಾಡಿದ್ದಾರೆ. ಇದರಿಂದ ಇಬ್ಬರಿಗೆ ಗುಂಡು ತಗುಲಿತ್ತು. ಒಬ್ಬ ವ್ಯಕ್ತಿ ಕೈಗೆ ಹಾಗೂ ಇನ್ನೋರ್ವನ ಭುಜಕ್ಕೆ ಗುಂಡು ತಲುಗಿತ್ತು. ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಓರ್ವ ಮೃತಪಟ್ಟಿದ್ದಾನೆ. ಇನ್ನೋಬ್ಬನ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತ, ಘಟನೆ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ದೌಡಾಯಿಸಿದ್ದು, ಭಯೋತ್ಪಾದಕರ ಸೆರೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ. ಜುಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ರಾಜಸ್ಥಾನ ಮೂಲದ ಬ್ಯಾಂಕ್ ಸಿಬ್ಬಂದಿಗೆ ಉಗ್ರರು ಗುಂಡಿಕ್ಕಿ ಕೊಂದಿದ್ದರು. ಆ ಬಳಿಕವಷ್ಟೇ ಬುದ್ಗಾಮ್ ಜಿಲ್ಲೆಯಲ್ಲೂ ದಾಳಿಯಾಗಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹೆಚ್ಚುತ್ತಿದೆ ಉದ್ದೇಶಿತ ಹತ್ಯೆ: ಶಾ-ದೋವಲ್ ನಿರಂತರ ಸಭೆ