ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರಿಗೆ ಅಗ್ನಿಶಾಮಕ ತರಬೇತಿ ನೀಡಿದ ವಿವಾದ ಭುಗಿಲೆದ್ದಿದ್ದು, ಇಬ್ಬರು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಮೂವರನ್ನು ವರ್ಗಾವಣೆ ಮಾಡಲಾಗಿದೆ.
ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮಾ. 30ರಂದು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಆಲುವಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಭಾಗವಾಗಿ ಪಿಎಫ್‌ಐ ಕಾರ್ಯಕರ್ತರಿಗೆ ತರಬೇತಿ ಆಯೋಜಿಸಿದ್ದರು ಎಂದು ವರದಿಯಾಗಿದೆ.
ತರಬೇತಿ ಅವಧಿಯ ಫೋಟೋಗಳು ವೈರಲ್ ಆದ ನಂತರ ರಾಜ್ಯ ಅಗ್ನಿಶಾಮಕ ದಳದ ಮುಖ್ಯಸ್ಥೆ ಬಿ.ಸಂಧ್ಯಾ ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಭಾರತೀಯ ಜನತಾ ಪಕ್ಷದ ರಾಜ್ಯ ಮುಖ್ಯಸ್ಥ ಕೆ. ಸುರೇಂದ್ರನ್ ಟ್ವಿಟರ್‌ನಲ್ಲಿ ಚಿತ್ರಗಳನ್ನು ಪೋಸ್ಟ್ ಮಾಡಿ, ಎಡಪಂಥೀಯ ಸರ್ಕಾರ, 'ಬೀದಿ ಶಕ್ತಿಗಳಿಗೆ' ರತ್ನಗಂಬಳಿ ಸ್ವಾಗತ ನೀಡುತ್ತಿದೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ಆಸೆ ತೀರಿಸುವಂತೆ ಪೀಡಿಸುತ್ತಿದ್ದ ಬಾವ: ನಿರಾಕರಿಸಿದ ನಾದಿನಿ, ಮಗಳ ಕೊಂದು ಸುಟ್ಟು ಹಾಕಿದ ಕಾಮುಕ!