ಬಲರಾಂಪುರ(ಉತ್ತರ ಪ್ರದೇಶ) : ಕೊಟ್ವಾಲಿ ಗ್ರಾಮಾಂತರ ಪ್ರದೇಶದ ಕಲ್ವರಿ ಗ್ರಾಮದಲ್ಲಿ ಪತ್ರಕರ್ತನ ಮನೆಯಲ್ಲಿ ಸ್ಫೋಟ ಸಂಭವಿಸಿದೆ.
ಸ್ಫೋಟದಲ್ಲಿ ಮನೆಗೆ ಹಾನಿಯಾಗಿದ್ದು, ಪತ್ರಕರ್ತ ರಾಕೇಶ್ ಸಿಂಗ್ ಸೇರಿದಂತೆ ಇಬ್ಬರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ಭಾರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿ ಭೇಟಿ ನೀಡಿದ್ದು, ಫೋರೆನ್ಸಿಕ್ ತಂಡದ ಸಹಾಯದಿಂದ ಸ್ಫೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.