ನವದೆಹಲಿ: ಸಹೋದರಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಬ್ಬರು ಪೊಲೀಸರ ಬಂಧನ ಮಾಡಲಾಗಿದೆ. ಇದರ ಬಂಧನಕ್ಕೆ ಸಂಬಂಧಿಸಿದಂತೆ ನೈಋತ್ಯ ದೆಹಲಿ ಡಿಸಿಪಿ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ. ಇಬ್ಬರು ಪೊಲೀಸರು ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಂತ್ರಸ್ತ ಸಹೋದರಿಯರು ಸಾಗರಪುರ ಪ್ರದೇಶದಲ್ಲಿ ವಾಸವಾಗಿದ್ದರು. ತಮ್ಮ ಮೇಲೆ ನಡೆದ ದುಷ್ಕೃತ್ಯದ ಬಗ್ಗೆ ಪ್ರಕರಣ ದಾಖಲು ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ: 'ಭಾಯ್, ನನ್ನ ಗೆಳತಿಗೆ iPhone ಕೊಡಿಸಿ ಎಂದ ಯುವಕ'; ಸೋನು ಸೂದ್ ಪ್ರತಿಕ್ರಿಯೆ ನೋಡಿ!
ಆರೋಪಿಗಳ ಹೇಳಿಕೆಗಳನ್ನ ಮ್ಯಾಜಿಸ್ಟ್ರೇಟ್ ಮುಂದೆ ಪಡೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದು, ಅವರ ವಿರುದ್ಧ ಈಗಾಗಲೇ ಐಪಿಸಿ ಸೆಕ್ಷನ್ 164ರ ಅಡಿ ದಾಖಲು ಮಾಡಿಕೊಳ್ಳಲಾಗಿದೆ ಎಂದಿದ್ದಾರೆ. ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಸಾಗರಪುರ ಕಾಲೋನಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.