ETV Bharat / bharat

ನಕ್ಸಲ್ ವಿರೋಧಿ ಕಾರ್ಯಾಚರಣೆ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ - ಅಕಬೇಡಾ ಪೊಲೀಸ್ ಠಾಣೆಯಲ್ಲಿ ಘಟನೆ

ಛತ್ತೀಸ್​ಗಢ ಜಿಲ್ಲೆಯ ನಾರಾಯಣಪುರ ಜಿಲ್ಲೆ ಹಾಗೂ ಮತ್ತೊಂದೆಡೆ ನಕ್ಸಲ್ ನಿಗ್ರಹ ಚಟುವಟಿಕೆಯಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Two security personnel injured in anti-Naxal operations in Chhattisgarh
ನಕ್ಸಲ್ ವಿರೋಧಿ ಕಾರ್ಯಾಚರಣೆ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ
author img

By

Published : Feb 24, 2021, 8:11 PM IST

ನಾರಾಯಣಪುರ, ಛತ್ತೀಸ್​ಗಢ: ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾರಾಯಣಪುರ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಮಹಾರಾಷ್ಟ್ರ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಜಿಲ್ಲಾ ಮೀಸಲು ಪಡೆಯ ಓರ್ವ ಯೋಧನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪನಿಗೆ 3.5 ಕೆಜಿ ಚಿನ್ನದ ಶಂಕುಚಕ್ರ ನೀಡಿದ ಭಕ್ತ... ಮೌಲ್ಯ ಎಷ್ಟು?

ಮತ್ತೊಂದು ಪ್ರಕರಣ ಅಕಬೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಕ್ಸಲರು ಇಟ್ಟಿದ್ದ ಸುಧಾರಿತ ಸ್ಫೋಟಕ ಬ್ಲಾಸ್ಟ್ ಆಗಿ ಛತ್ತೀಸ್​ಗಢ ಸಶಸ್ತ್ರಪಡೆಯ ಯೋಧ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.