ETV Bharat / bharat

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸಹೋದರಿಯರು: ಅತ್ಯಾಚಾರ, ಕೊಲೆ ಶಂಕೆ - ಪಶ್ಚಿಮ ಅಸ್ಸಾಂನ ಸುದ್ದಿ

ಅಸ್ಸಾಂನಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Two sisters found hanging in Assam village, family alleges rape, murder
ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸಹೋದರಿಯರು.. ಅತ್ಯಾಚಾರ, ಕೊಲೆ ಆರೋಪ
author img

By

Published : Jun 13, 2021, 7:43 AM IST

ಗುವಾಹಟಿ (ಅಸ್ಸಾಂ): ಇಬ್ಬರು ಸಹೋದರಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಅಸ್ಸಾಂನ ಕೊಕ್ರಜಾರ್​ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕಿಯರ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಬಾಲಕಿಯರ ಕುಟುಂಬಸ್ಥರು ಆರೋಪಿಸಿದ್ದಾರೆ. ಅಭಯಕುತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ 14 ಮತ್ತು 16 ವರ್ಷದ ಬಾಲಕಿಯರು ಮೃತಪಟ್ಟಿದ್ದಾರೆ. ಶುಕ್ರವಾರ ಮಧ್ಯಾಹ್ನದಿಂದ ಇವರು ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೇವಲ 12 ರೂಪಾಯಿಗೆ ಸಿಗುತ್ತೆ ಮನೆ.. ಎಲ್ಲಿ, ಯಾಕೆ ಗೊತ್ತಾ?

ಸದ್ಯಕ್ಕೆ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಕ್ರಜಾರ್ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.