ETV Bharat / bharat

ಜಮ್ಮು ಕಾಶ್ಮೀರ: ಗಡಿದಾಟಿ ಬಂದ ಇಬ್ಬರು ಉಗ್ರರ ಹತ್ಯೆ

ಎಲ್​ಒಸಿಯಲ್ಲಿ ಗಡಿದಾಟಿ ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿವೆ ಎಂದು ರಕ್ಷಣಾ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಭಯೋತ್ಪಾದಕರನ್ನು ಕೊಂದ ಸೇನೆ
ಭಯೋತ್ಪಾದಕರನ್ನು ಕೊಂದ ಸೇನೆ
author img

By ETV Bharat Karnataka Team

Published : Oct 22, 2023, 10:56 PM IST

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿವೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಎರಡು ಎಕೆ ಸರಣಿ ರೈಫಲ್‌ಗಳು, ಆರು ಪಿಸ್ತೂಲ್‌ಗಳು ಮತ್ತು ನಾಲ್ಕು ಚೈನೀಸ್ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿವೆ. ಆದಾಗ್ಯೂ, ಪ್ರತಿಕೂಲ ಹವಾಮಾನದ ಕಾರಣ, ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಹವಾಮಾನ ಸುಧಾರಿಸಿದ ನಂತರ ಪುನರಾರಂಭಿಸಲಾಗುವುದು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೇನೆ, ಜೆ & ಕೆ ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಾರಾಮುಲ್ಲಾದ ಉರಿ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳಿಂದ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಯಿತು ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಸೈನ್ಯವು ಈ ಹಿಂದೆ ಹೇಳಿತ್ತು.

"ಗಡಿಯಲ್ಲಿ ನುಸುಳಿದ್ದ ಭಯೋತ್ಪಾದಕರೊಂದಿಗೆ ಸೇನೆ ಗುಂಡಿನ ಚಕಮಕಿ ನಡೆಸಿತು. ನಂತರ 06x ಪಿಸ್ತೂಲ್ಗಳು ಮತ್ತು 04x ಹ್ಯಾಂಡ್ ಗ್ರೆನೇಡ್​ಗಳನ್ನು ವಶಪಡಿಸಿಕೊಂಡವು. ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ," ಎಂದು ಅದು ಹೇಳಿತ್ತು.

ಭಾರತಕ್ಕೆ ಕಾಲಿಟ್ಟಿರುವ 70 ಶಂಕಿತ ಉಗ್ರರು: ನಕಲಿ ಪಾಸ್‌ಪೋರ್ಟ್‌ನೊಂದಿಗೆ ಉಗ್ರರು ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು (ಅಕ್ಟೋಬರ್ -21-2023) ಶಂಕೆ ವ್ಯಕ್ತಪಡಿಸಿದ್ದವು. ಸುಮಾರು 70 ಉಗ್ರರು ನೇಪಾಳದ ಗಡಿಯಿಂದ ಭಾರತವನ್ನು ಪ್ರವೇಶಿಸಿದ್ದಾರೆ. ಇವರೆಲ್ಲರೂ ಐಎಸ್‌ಐ (ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್) ಅಥವಾ ಜಮ್ಮತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಬಾಂಗ್ಲಾದೇಶದ ಗಡಿಯಲ್ಲಿ ಎಚ್ಚರಿಕೆ ನೀಡಿತ್ತು.

ಪ್ರಸ್ತುತ ಎಲ್ಲಾ ಗಡಿಗಳಲ್ಲಿ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ. ಆದರೆ, ಕೆಲವೆಡೆ ಮಾತ್ರ ಅಕ್ರಮವಾಗಿ ಉಗ್ರರು ನುಗ್ಗುತ್ತಿದ್ದಾರೆ. ಅದರಲ್ಲೂ ಪಾಕಿಸ್ತಾನದ ಕಡೆಯಿಂದ ಭಾರತದೊಳಗೆ ನುಸುಳುವುದು ಅಸಾಧ್ಯ. ಅದಕ್ಕಾಗಿಯೇ ನೇಪಾಳದ ಗಡಿಯಿಂದ ಭಯೋತ್ಪಾದಕರು ಭಾರತಕ್ಕೆ ಬರುತ್ತಿದ್ದಾರೆ. ಭಯೋತ್ಪಾದಕರ ಹೊರತಾಗಿ ಕೆಲವು ವಿದೇಶಿಯರೂ ದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆಯ ಮೂಲಗಳು ತಿಳಿಸಿದ್ದವು.

ಅಕ್ರಮವಾಗಿ ಭಾರತ ಪ್ರವೇಶಿಸಿರುವ ಭಯೋತ್ಪಾದಕರ ಶೋಧಕ್ಕೆ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ಸಂಸ್ಥೆಯ ಮೂಲಗಳು ತಿಳಿಸಿದ್ದವು. ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳು ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಆರಂಭಿಸಿರುವುದಾಗಿ ತಿಳಿಸಿದ್ದವು. ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಕೇಂದ್ರ ಭದ್ರತಾ ಏಜೆನ್ಸಿಗಳೊಂದಿಗೆ ಈಗಾಗಲೇ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶೋಧ ನಡೆಸಿದ್ದವು. ಕೆಲವರು ನಕಲಿ ಪಾಸ್‌ಪೋರ್ಟ್‌ನೊಂದಿಗೆ ಪ್ರವೇಶಿಸಿರುವುದು ಪತ್ತೆಯಾಗಿತ್ತು. ಸಿಬಿಐ ರಾಷ್ಟ್ರೀಯ ತನಿಖಾ ಸಂಸ್ಥೆ ಜೊತೆ ಬಂಗಾಳ ಪೊಲೀಸರು ಸಭೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿತ್ತು.

ಇದನ್ನೂ ಓದಿ: ಪುಲ್ವಾಮಾ: ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.