ETV Bharat / bharat

ಕುಲ್ಗಾಮ್​ನಲ್ಲಿ ಗುಂಡಿನ ಚಕಮಕಿ: ಮೂವರು ಎಲ್​ಇಟಿ ಉಗ್ರರು ಖತಂ

ಜಮ್ಮು- ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದ್ದು ಮೂವರು ಭಯೋತ್ಪಾದಕರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.

two-terrorists
ಉಗ್ರರು ಖತಂ
author img

By

Published : Apr 24, 2022, 5:49 PM IST

Updated : Apr 24, 2022, 6:54 PM IST

ಜಮ್ಮು- ಕಾಶ್ಮೀರ: ಪಂಚಾಯತ್​ ರಾಜ್​ ದಿನದ ಹಿನ್ನೆಲೆಯಲ್ಲಿ ಜಮ್ಮು- ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಹಿಂದಿರುಗಿದ ಬೆನ್ನಲ್ಲೇ ಕಣಿವೆಯಲ್ಲಿ ಗುಂಡಿನ ಮೊರೆತ ಕೇಳಿ ಬಂದಿದೆ. ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಈ ಎನ್‌ಕೌಂಟರ್‌ ನಡೆದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿಯ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಎಲ್‌ಇಟಿ ಸಂಘಟನೆಯ ಮೂವರು ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿಯ ಮೇಲೆಯೇ ಉಗ್ರರು ಗುಂಡು ಹಾರಿಸಿದ್ದಾರೆ. ಈ ವೇಳೆ ನಡೆದ ಚಕಮಕಿಯಲ್ಲಿ ಮೂವರು ಉಗ್ರರನ್ನು ಮಿಲಿಟರಿ ಪಡೆ ಹೊಡೆದು ಹಾಕಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಅಡಗಿರುವ ಉಗ್ರರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡುವ ಮುನ್ನ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದರು.

ಇದನ್ನೂ ಓದಿ: ಜಮ್ಮು- ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಬೇರುಗಳು ಆಳವಾಗಿವೆ: ಪ್ರಧಾನಿ ಮೋದಿ

Last Updated : Apr 24, 2022, 6:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.