ವಲ್ಸಾದ್(ಗುಜರಾತ್): ಎರಡು ಟ್ರಕ್ಗಳ ಮಧ್ಯೆ ಸೋಮವಾರ ತಡರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಹೊತ್ತಿ ಉರಿದಿರುವ ಘಟನೆ ಮುಂಬೈ-ಅಹಮದಾಬಾದ್ ಹೆದ್ದಾರಿಯ ವಲ್ಸಾದ್‌ನ ಪಾರ್ಡಿ ಬಳಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಚಾಲಕ ಸಜೀವ ದಹನವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು, ಎನ್ಹೆಚ್-48 ನಲ್ಲಿ ಅಪಘಾತ ಸಂಭವಿಸಿದೆ ಎಂದು ನಮಗೆ ಮಾಹಿತಿ ಬಂದಿತ್ತು. ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ ಎಂದು ತಿಳಿಸಿದ್ದಾರೆ.