ಮಾಲ್ಡಾ (ಪಶ್ಚಿಮ ಬಂಗಾಳ): ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಹೇಯ ಕೃತ್ಯ ಬೆಳಕಿಗೆ ಬಂದ ಬೆನ್ನಲ್ಲೇ, ಪಶ್ಚಿಮ ಬಂಗಾಳದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಮಹಿಳೆಯರ ಗುಂಪೊಂದು ಸಾರ್ವಜನಿಕವಾಗಿ ಅಮಾನುಷವಾಗಿ ಥಳಿಸಿ ವಿವಸ್ತ್ರಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆಯು ಮಾಲ್ಡಾದ ಪಕುವಾಹತ್ ಪ್ರದೇಶದಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಮಹಿಳೆಯರನ್ನು ಕಳ್ಳತನದ ಶಂಕೆಯ ಮೇಲೆ ಹಿಡಿದು ಅವರ ಮೇಲೆ ನಿಷ್ಕರುಣೆಯಿಂದ ಥಳಿಸಿ ಬೆತ್ತಲೆಗೊಳಿಸಿದ್ದಾರೆ.
ಕಳ್ಳತನ ಆಪಾದಿತ ಮಹಿಳೆಯರನ್ನು ಅಮಾನವೀಯವಾಗಿ ನಡೆಸಿಕೊಂಡು, ಕ್ರೂರವಾಗಿ ಹಲ್ಲೆ ಮಾಡಲಾಗುತ್ತಿದ್ದು, ಸುತ್ತಲೂ ನೆರೆದ ಜನರು ಇದನ್ನು ನೋಡುತ್ತಾ ನಿಂತಿದ್ದು ವಿಡಿಯೋದಲ್ಲಿ ಕಾಣಬಹುದು. ಇಂತಹ ಹೇಯ ಕೃತ್ಯ ನಡೆದರೂ ಸಂತ್ರಸ್ತೆ ಮಹಿಳೆಯರು ಮತ್ತು ವ್ಯಾಪಾರಿ ಮಹಿಳೆಯರು ಯಾವುದೇ ದೂರು ದಾಖಲಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ.
-
The horror continues in West Bengal. Two Tribal women were stripped naked, tortured and beaten mercilessly, while police remained a mute spectator in Pakua Hat area of Bamangola Police Station, Malda.
— Amit Malviya (@amitmalviya) July 22, 2023 " class="align-text-top noRightClick twitterSection" data="
The horrific incident took place on the morning of 19th July. The women… pic.twitter.com/tyve54vMmg
">The horror continues in West Bengal. Two Tribal women were stripped naked, tortured and beaten mercilessly, while police remained a mute spectator in Pakua Hat area of Bamangola Police Station, Malda.
— Amit Malviya (@amitmalviya) July 22, 2023
The horrific incident took place on the morning of 19th July. The women… pic.twitter.com/tyve54vMmgThe horror continues in West Bengal. Two Tribal women were stripped naked, tortured and beaten mercilessly, while police remained a mute spectator in Pakua Hat area of Bamangola Police Station, Malda.
— Amit Malviya (@amitmalviya) July 22, 2023
The horrific incident took place on the morning of 19th July. The women… pic.twitter.com/tyve54vMmg
ಅಂಗಡಿಯೊಂದರಲ್ಲಿ ಸಂತ್ರಸ್ತ ಮಹಿಳೆಯರಿಬ್ಬರು ಕಳ್ಳತನ ಮಾಡುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಇದರಿಂದ ಕೋಪೋದ್ರಿಕ್ತರಾದ ಮಹಿಳೆಯರ ಗುಂಪು ಅವರನ್ನು ಸಾರ್ವಜನಿಕವಾಗಿ ಕೂದಲು ಹಿಡಿದು ಎಳೆದಾಡಿ, ಮೈಮೇಲಿದ್ದ ಬಟ್ಟೆಯನ್ನು ಕಿತ್ತೆಸೆದಿದ್ದಾರೆ. ಪೆಟ್ಟು, ಅವಮಾನ ಅನುಭವಿಸಿದ ಆ ಮಹಿಳೆಯರು ಯಾವುದೇ ಪ್ರತಿರೋಧ ತೋರದೇ ಇರುವುದು ವಿಡಿಯೋದಲ್ಲಿ ದಾಖಲಾಗಿದೆ.
ಸೊಮೋಟೋ ಕೇಸ್ ದಾಖಲಿಸಿಕೊಂಡ ಪೊಲೀಸರು: ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸುಮೋಟೋ ಕೇಸ್ ದಾಖಲಿಸಿಕೊಂಡು ಘಟನೆಯ ಬಗ್ಗೆ ಪಶ್ಚಿಮಬಂಗಾಳ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. "ಘಟನೆಯ ತನಿಖೆಗಾಗಿ ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಹಲ್ಲೆಕೋರರ ವಿರುದ್ಧ ಸುಮೋಟೋ ಪ್ರಕರಣವನ್ನು ದಾಖಲಿಸಲಾಗಿದೆ. ಅಪರಾಧಿಗಳನ್ನು ಪತ್ತೆ ಹಚ್ಚಲು ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ" ಎಂದು ಮಾಲ್ಡಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಕುಮಾರ್ ಜಾದವ್ ತಿಳಿಸಿದರು.
ಸರ್ಕಾರದ ವಿರುದ್ಧ ಬಿಜೆಪಿ ಟೀಕೆ: ಇತ್ತ, ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ರಾಜ್ಯದಲ್ಲಿ ಇಂತಹ ಘಟನೆ ನಡೆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ, ಖಾಕಿ ಪಡೆ ಮೂಕ ಪ್ರೇಕ್ಷಕವಾಗಿದೆ ಎಂದು ಹರಿಹಾಯ್ದಿದ್ದಾರೆ.
ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಅವರು ವಿಡಿಯೋವನ್ನು ಟ್ವೀಟ್ ಮಾಡಿಕೊಂಡಿದ್ದು, ಪಶ್ಚಿಮ ಬಂಗಾಳದಲ್ಲಿ ಭಯಾನಕತೆ ಮುಂದುವರೆದಿದೆ. ಮಾಲ್ಡಾದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ವಿವಸ್ತ್ರಗೊಳಿಸಿ, ನಿರ್ದಯವಾಗಿ ಥಳಿಸಿ ಚಿತ್ರಹಿಂಸೆ ನೀಡಲಾಗಿದೆ. ಆದರೆ, ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಮಣಿಪುರ ಘಟನೆಯ ವಿರುದ್ಧ ದನಿಯೆತ್ತಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜ್ಯದಲ್ಲಿ ಜುಲೈ 19 ರಂದು ಇಂತಹ ಭಯಾನಕ ಘಟನೆ ನಡೆದಿದೆ. ಸಿಎಂ ಅಲ್ಲದೇ, ಗೃಹಮಂತ್ರಿಯೂ ಆಗಿರುವ ಮಮತಾ ಅವರು ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
ಇಂತಹ ಅನಾಗರಿಕತೆ ನಡೆಯನ್ನು ಈವರೆಗೂ ಖಂಡಿಸಿಲ್ಲ. ಕನಿಷ್ಠ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಇದು ಮುಖ್ಯಮಂತ್ರಿಯಾಗಿ ಅವರ ವೈಫಲ್ಯವನ್ನು ಬಹಿರಂಗಪಡಿಸುತ್ತದೆ. ಮಣಿಪುರದಲ್ಲಿ ನಡೆದ ಕೃತ್ಯದ ಬಗ್ಗೆ ಮಾತ್ರ ಅವರು ಕಣ್ಣೀರು ಸುರಿಸಿದರು. ಕಾರಣ ಅದು ರಾಜಕೀಯವಾಗಿ ಲಾಭದಾಯಕವಾಗಿತ್ತು ಎಂದು ಅವರು ಟೀಕಿಸಿದ್ದಾರೆ.
ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ತೀವ್ರ ಆಕ್ರೋಶ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ