ETV Bharat / bharat

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ.. ದುಷ್ಕೃತ್ಯದ ಬಳಿಕ ದೇಹವನ್ನು ತುಂಡ ತುಂಡಾಗಿ ಕತ್ತರಿಸಿದ ಕಿರಾತಕ - ಈಟಿವಿ ಭಾರತ ಕನ್ನಡ

ವ್ಯಕ್ತಿಯೋರ್ವ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

udaipur-man-detained-for-chopping-8-year-olds-dead-body-into-several-pieces-after-raping-her
8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ದೇಹವನ್ನು ತುಂಡ ತುಂಡಾಗಿ ಕತ್ತರಿಸಿದ ಕಿರಾತಕ
author img

By

Published : Apr 2, 2023, 11:05 PM IST

ಉದಯಪುರ (ರಾಜಸ್ಥಾನ): ನೆರೆ ಮನೆಯ ವ್ಯಕ್ತಿಯೋರ್ವ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ತುಂಡು ತುಂಡಾಗಿ ಕತ್ತರಿಸಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಅಮಾನವೀಯ ಘಟನೆ ಉದಯಪುರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಸಂತ್ರಸ್ತ ಬಾಲಕಿಯ ನೆರೆಮನೆಯ ನಿವಾಸಿ ಕಮಲೇಶ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಿರ್ಜನ ಪ್ರದೇಶದಲ್ಲಿ ಬಿಸಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮಾಹಿತಿ ನೀಡಿದ ಉದಯ್‌ಪುರ ಎಸ್‌ಪಿ ವಿಕಾಸ್ ಶರ್ಮಾ, ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಯು ತನ್ನ ಮನೆಯಲ್ಲಿ ಒಬ್ಬನೇ ವಿಡಿಯೋ ಗೇಮ್​ ಆಡುತ್ತಿದ್ದನು. ಈ ವೇಳೆ ಮನೆಯ ಹೊರಗಡೆ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ತನ್ನ ಮನೆಯಲ್ಲೇ ಬಾಲಕಿಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಂತರ ನಿರ್ಜನ ಪ್ರದೇಶದಲ್ಲಿ ಬಿಸಾಡಿದ್ದಾನೆ. ಈ ಸಂದರ್ಭದಲ್ಲಿ ಆರೋಪಿಯ ಪೋಷಕರು ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಇನ್ನು ಈ ವಿಡಿಯೋ ಗೇಮ್​​ಗೂ ಮತ್ತು ಈತನ ಕೃತ್ಯಕ್ಕೂ ಏನಾದರೂ ಸಂಬಂಧ ಇದೆಯಾ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಾರ್ಚ್​ 29ರಂದು ಬಾಲಕಿಯು ನಾಪತ್ತೆಯಾಗಿರುವ ಬಗ್ಗೆ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಬಾಲಕಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ದರು. ಈ ವೇಳೆ ಅನುಮಾನಗೊಂಡ ಪೊಲೀಸರು ನೆರೆ ಮನೆಯ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಘಟನೆ ನಡೆದ ನಾಲ್ಕು ದಿನಗಳ ನಂತರ ಸಂತ್ರಸ್ತೆಯ ಮನೆಯಿಂದ ಸುಮಾರು 200 ಮೀಟರ್​ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

ಪ್ರಕರಣದ ತನಿಖೆ ನಡೆಸುವಾಗ ಪೊಲೀಸರಿಗೆ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಇರುವ ಬಗ್ಗೆ ಮಾಹಿತಿ ಲಭಿಸಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ತುಂಡು ತುಂಡಾದ ದೇಹದ ಭಾಗಗಳನ್ನು ಕಂಡಿದ್ದಾರೆ. ಬಳಿಕ ಈ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದಾಗ, ವರದಿಯಲ್ಲಿ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಯುವಕನ ಅತ್ಯಾಚಾರ ಕೃತ್ಯಕ್ಕೆ ಅಪ್ರಾಪ್ತ ಬಾಲಕಿ ಬಲಿ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.