ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಈ ಸಂದರ್ಭದಲ್ಲಿ ಇಂಡೋ - ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸುವ ಉದ್ದೇಶದಿಂದ ಕ್ವಾಡ್ - ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕ ದೇಶಗಳ ನಾಯಕರು ಗುರುವಾರದಂದು ವರ್ಚುಯಲ್ ಸಭೆ ನಡೆಸಿದ್ದಾರೆ. ಉಕ್ರೇನ್ ಮೇಲಿನ ರಷ್ಯಾ ಮಿಲಿಟರಿ ಕಾರ್ಯಾಚರಣೆ ಕುರಿತು ಇದೇ ವೇಳೆ ಚರ್ಚಿಸಿದ್ದಾರೆ.
ಕ್ವಾಡ್ ಲೀಡರ್‌ಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯನ್ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಭಾಗವಹಿಸಿದ್ದರು. ಈ ಸಭೆಯಲ್ಲಿ ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ.
ಉಕ್ರೇನ್ ಮೇಲಿನ ರಷ್ಯಾದ ದಾಳಿಯಿಂದ ಉಂಟಾಗಿರುವ ಪರಿಸ್ಥಿತಿ, ಭವಿಷ್ಯ ಮತ್ತು ಮಾನವೀಯತೆ ನೆರವಿನ ಬಗ್ಗೆಯೂ ಚರ್ಚಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಎರಡೂ ದೇಶಗಳು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳುವ ಅಗತ್ಯತೆಯ ಬಗ್ಗೆ ಒತ್ತಿ ಹೇಳಿದರು.
-
Participated in a productive virtual Quad Leaders’ meeting today with @POTUS @JoeBiden, PM @ScottMorrisonMP and @JPN_PMO Kishida. Reaffirmed our shared commitment to ensuring security, safety and prosperity in the Indo-Pacific.
— Narendra Modi (@narendramodi) March 3, 2022 " class="align-text-top noRightClick twitterSection" data="
">Participated in a productive virtual Quad Leaders’ meeting today with @POTUS @JoeBiden, PM @ScottMorrisonMP and @JPN_PMO Kishida. Reaffirmed our shared commitment to ensuring security, safety and prosperity in the Indo-Pacific.
— Narendra Modi (@narendramodi) March 3, 2022Participated in a productive virtual Quad Leaders’ meeting today with @POTUS @JoeBiden, PM @ScottMorrisonMP and @JPN_PMO Kishida. Reaffirmed our shared commitment to ensuring security, safety and prosperity in the Indo-Pacific.
— Narendra Modi (@narendramodi) March 3, 2022
ಈ ಬಗ್ಗೆ ಟ್ವೀಟ್ ಮಾಡಿರುವ ಪಿಎಂ, ಕ್ವಾಡ್ ನಾಯಕರೊಂದಿಗೆ ವರ್ಚುಯಲ್ ಮೂಲಕ ಸಭೆ ನಡೆಸಿದ್ದೇವೆ. ಇಂಡೋ-ಪೆಸಿಫಿಕ್‌ನಲ್ಲಿ ಭದ್ರತೆ, ಸುರಕ್ಷತೆ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಲು ನಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಉಕ್ರೇನ್ - ರಷ್ಯಾ ಯುದ್ಧ: ಅಮೆರಿಕದಿಂದ ಟಿಪಿಎಸ್ ವಿಸ್ತರಣೆ.. ಮಾಜಿ ಚಾನ್ಸೆಲರ್ ವಿರುದ್ಧ ಜರ್ಮನಿಯಲ್ಲಿ ಅಸಮಾಧಾನ
ಸಂವಾದ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳುವ ಅಗತ್ಯತೆ ಬಗ್ಗೆ ಮೋದಿ ಚರ್ಚಿಸಿದರು. ಅಲ್ಲದೇ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಕಾನೂನು ಮತ್ತು ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಗೌರವಿಸುವ ಮಹತ್ವವನ್ನು ಮೋದಿ ಅವರು ತಮ್ಮ ಹೇಳಿಕೆಯಲ್ಲಿ ಪುನರುಚ್ಚರಿಸಿದ್ದಾರೆ..