ನವದೆಹಲಿ: ಈಶಾನ್ಯ ದೆಹಲಿ ಹಿಂಸಾಚಾರ ಪ್ರಕರಣದ ಆರೋಪಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಲೀದ್ಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.
ಉಮರ್ ಖಲೀದ್ ಜಾಮೀನು ಅರ್ಜಿ ಆಲಿಸಿದ ನ್ಯಾಯಾಲಯವು "ಹಿಂಸಾಚಾರದ ಭಾಗವಾಗಿದ್ದ ಇತರರನ್ನು ಗುರುತಿಸಿ ಬಂಧಿಸುವ ಕಾರಣದಿಂದ ಅವನನ್ನು (ಖಾಲಿದ್) ಜೈಲಿನಲ್ಲಿ ಬಂಧಿಸಿಡಲು ಸಾಧ್ಯವಿಲ್ಲ" ಎಂದು ಹೇಳಿದೆ.
ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ 75 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಲಭೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಈವರೆಗೆ 250ಕ್ಕೂ ಹೆಚ್ಚು ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದ್ದು, ಇದರಲ್ಲಿ 1,153 ಆರೋಪಿಗಳಿಗೆ ಚಾರ್ಜ್‌ಶೀಟ್ ನೀಡಲಾಗಿದೆ.