ನವದೆಹಲಿ: 2020ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಲ್ಲು ತೂರಾಟ ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಉಮರ್ ಖಾಲಿದ್ ಮತ್ತು ಯುನೈಟೆಡ್ ಎಗೇನ್ಸ್ಟ್ ಹೇಟ್ ಸದಸ್ಯ ಖಾಲಿದ್ ಸೈಫಿ ಅವರನ್ನು ಖುಲಾಸೆಗೊಳಿಸಲಾಗಿದೆ.
ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿ ಅವರನ್ನು ಖುಲಾಸೆಗೊಳಿಸಿ ಆದೇಶಿಸಿದ್ದಾರೆ.
ಇದನ್ನೂ ಓದಿ: ಖಾಲಿದ್ ವಿರುದ್ಧ ಸಲ್ಲಿಸಿರುವ ಚಾರ್ಜ್ಶೀಟ್ ವೆಬ್ ಸರಣಿಯಿದ್ದಂತೆ: ವಕೀಲ ತ್ರಿದೀಪ್ ಪಾಯ್ಸ್
2020ರಲ್ಲಿ ದೆಹಲಿ ಗಲಭೆಯಲ್ಲಿ ಕಲ್ಲು ತೂರಾಟ ಆರೋಪದ ಸಂಬಂಧ ಪೊಲೀಸ್ ಠಾಣೆ ಖಜೂರಿ ಖಾಸ್‌ನಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಕಲ್ಲು ತೂರಾಟ ಪ್ರಕರಣದಲ್ಲಿ ಖಾಲಿದ್ ಮತ್ತು ಸೈಫಿ ಜಾಮೀನು ಪಡೆದಿದ್ದರೂ, ಗಲಭೆಯ ಹಿಂದೆ ದೊಡ್ಡ ಪಿತೂರಿ ಆರೋಪದಡಿ ಯುಎಪಿಎ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ: ದೆಹಲಿ ಗಲಭೆ ಪ್ರಕರಣ: ಅಪರಾಧ ವಿಭಾಗದ ಪೊಲೀಸರಿಂದ ಉಮರ್ ಖಾಲಿದ್ ಬಂಧನ