ETV Bharat / bharat

ನಿಯಂತ್ರಣ ತಪ್ಪಿ ಕಾಲೇಜ್​​ ವಿದ್ಯಾರ್ಥಿನಿಗೆ ಗುದ್ದಿದ ಕಾರು... ಸಿಸಿಟಿವಿ ವಿಡಿಯೋ

author img

By

Published : Dec 15, 2021, 2:40 AM IST

ಕಾಲೇಜ್​ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಾರ್​ವೊಂದು ಡಿಕ್ಕಿ ಹೊಡೆದಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾಳೆ.

Car crushes college student in Madhy pradesh

ರೇವಾ(ಮಧ್ಯಪ್ರದೇಶ): ನಿಯಂತ್ರಣ ಕಳೆದುಕೊಂಡ ಕಾರ್​ವೊಂದು ಏಕಾಏಕಿ ಕಾಲೇಜ್​ ವಿದ್ಯಾರ್ಥಿನಿಗೆ ಗುದ್ದಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಇದರ ಸಂಪೂರ್ಣ ದೃಶ್ಯಾವಳಿ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.

ನಿಯಂತ್ರಣ ತಪ್ಪಿ ಕಾಲೇಜ್​​ ವಿದ್ಯಾರ್ಥಿನಿಗೆ ಗುದ್ದಿದ ಕಾರು

ರೇವಾ ಜಿಲ್ಲೆಯ ಮೌಗಂಜ್​​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡಿರುವ ಕಾರ್​​​ ಕಾಲೇಜ್​​ನಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ. ಇದರ ಬೆನ್ನಲ್ಲೇ ಎಲೆಕ್ಟ್ರಾನಿಕ್​ ಅಂಗಡಿಯೊಳಗೆ ನುಗ್ಗಿದೆ.

ರಭಸವಾಗಿ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ವಿದ್ಯಾರ್ಥಿನಿ ಶಿಖಾ ಸಿಂಗ್​ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಸ್ಥಳೀಯರು ಚಾಲಕನನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಅಪಘಾತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿರಿ: ಸೋಲಿಸಲು ಸ್ಪರ್ಧಿಸಿರಲಿಲ್ಲ, ಗೆಲ್ಲಲೇಬೇಕೆಂದು ಸ್ಪರ್ಧಿಸಿದ್ವಿ; ರಮೇಶ್​ ಜಾರಕಿಹೊಳಿಗೆ ಹೆಬ್ಬಾಳ್ಕರ್ ಟಾಂಗ್

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ತನಿಖೆ ನಡೆಸಿ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.