ಲಕ್ನೋ(ಉತ್ತರ ಪ್ರದೇಶ): ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಲಕ್ನೋದ ದಿಲ್‌ಶುಕ್ ಪ್ರದೇಶದಲ್ಲಿ ನಡೆಯಿತು. ರಕ್ಷಣಾ ಕಾರ್ಯಕ್ಕೆ ಸ್ಥಳೀಯ ಪೊಲೀಸರು ಎನ್‌ಡಿಆರ್‌ಎಫ್ ಮೊರೆ ಹೋಗಿದ್ದಾರೆ.
ಘಟನೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣೆಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
-
#UPCM @myogiadityanath ने जनपद उन्नाव में दीवार गिरने के हादसे में हुई जनहानि पर गहरा दुःख व्यक्त किया है।
— CM Office, GoUP (@CMOfficeUP) September 16, 2022 " class="align-text-top noRightClick twitterSection" data="
मुख्यमंत्री जी ने शोक संतप्त परिजनों के प्रति संवेदना व्यक्त की है।
">#UPCM @myogiadityanath ने जनपद उन्नाव में दीवार गिरने के हादसे में हुई जनहानि पर गहरा दुःख व्यक्त किया है।
— CM Office, GoUP (@CMOfficeUP) September 16, 2022
मुख्यमंत्री जी ने शोक संतप्त परिजनों के प्रति संवेदना व्यक्त की है।#UPCM @myogiadityanath ने जनपद उन्नाव में दीवार गिरने के हादसे में हुई जनहानि पर गहरा दुःख व्यक्त किया है।
— CM Office, GoUP (@CMOfficeUP) September 16, 2022
मुख्यमंत्री जी ने शोक संतप्त परिजनों के प्रति संवेदना व्यक्त की है।
ಪರಿಹಾರ ಘೋಷಣೆ: ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗು ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಮಹಿಳೆಯರು, ಮಕ್ಕಳೂ ಸೇರಿದ್ದಾರೆ. ಉಳಿದಂತೆ, ಇಬ್ಬರು ಮಹಿಳೆಯರು ಸೇರಿ ಓರ್ವ ಮಗುವಿಗೆ ಗಾಯವಾಗಿದೆ. ಘಟನಾ ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: ಊಟ ಮಾಡಿ ಕುಳಿತಿರುವಾಗ ಕುಸಿದು ಬಿದ್ದ ಮನೆ : ಅವಶೇಷಗಳಡಿ ಸಿಲುಕಿದ್ದ ತಾಯಿ ಮಗನ ರಕ್ಷಣೆ