ETV Bharat / bharat

'ಸ್ವೆಚ್ಚಾ' ಯೋಜನೆ: ಆಂಧ್ರದ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ಸ್​

ಆಂಧ್ರಪ್ರದೇಶ ಸರ್ಕಾರವು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಒದಗಿಸುತ್ತದೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ 7 ರಿಂದ 12 ನೇ ತರಗತಿ ಓದುತ್ತಿರುವ ಸುಮಾರು 10 ಲಕ್ಷ ಬಾಲಕಿಯರಿಗೆ ಪ್ರತಿ ತಿಂಗಳು ಹತ್ತು ಸ್ಯಾನಿಟರಿ ನ್ಯಾಪ್ಕಿನ್​ಗಳನ್ನು ನೀಡಲಾಗುತ್ತದೆ.

Andhra govt
ಆಂಧ್ರಪ್ರದೇಶ ಸರ್ಕಾರ
author img

By

Published : Oct 5, 2021, 12:14 PM IST

Updated : Oct 5, 2021, 1:01 PM IST

ವಿಶಾಖಪಟ್ಟಣಂ(ಆಂಧ್ರಪ್ರದೇಶ): ಮಹಿಳೆಯರು ಮತ್ತು ಹದಿಹರೆಯದ ಬಾಲಕಿಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಇಂದು 'ಸ್ವೆಚ್ಚಾ' ಕಾರ್ಯಕ್ರಮವನ್ನು ಜಾರಿಗೆ ತಂದಿದ್ದಾರೆ.

ಈ ಉಪಕ್ರಮದ ಅಡಿಯಲ್ಲಿ, ರಾಜ್ಯ ಸರ್ಕಾರವು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಒದಗಿಸುತ್ತದೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ 7 ರಿಂದ 12 ನೇ ತರಗತಿ ಓದುತ್ತಿರುವ ಸುಮಾರು 10 ಲಕ್ಷ ಬಾಲಕಿಯರಿಗೆ ಪ್ರತಿ ತಿಂಗಳು 10 ಸ್ಯಾನಿಟರಿ ನ್ಯಾಪ್ಕಿನ್​ಗಳನ್ನು ನೀಡಲಾಗುತ್ತದೆ.

ಇದಲ್ಲದೇ, ಕೈಗೆಟುಕುವ ದರದಲ್ಲಿ ಗುಣಮಟ್ಟದ ನ್ಯಾಪ್‌ಕಿನ್‌ಗಳು ನಗರ ಮತ್ತು ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಎಲ್ಲಾ 'ವೈಎಸ್‌ಆರ್ ಚೆಯುತಾ' ಮಳಿಗೆಗಳಲ್ಲಿ ಲಭ್ಯವಿರುತ್ತದೆ.

ಈ ಸಂಬಂಧ ಅಧಿಕೃತ ಹೇಳಿಕೆಯನ್ನು ರಾಜ್ಯ ಸರ್ಕಾರ ನೀಡಿದ್ದು, "ಪ್ರತಿ ಎರಡು ತಿಂಗಳಿಗೊಮ್ಮೆ, ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಲಿದ್ದಾರೆ. ರಾಜ್ಯಾದ್ಯಂತ 10,388 ಶಾಲೆ ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್​ಗಳನ್ನು ವಿತರಣೆ ಮಾಡಲಾಗುತ್ತದೆ. ಇದರ ಜೊತೆಯಲ್ಲಿ, ಸರ್ಕಾರವು ಯುನಿಸೆಫ್, WASH ಮತ್ತು ಪಿ & ಜಿ ಜೊತೆ ಸಹಭಾಗಿತ್ವದಲ್ಲಿ ಮುಟ್ಟಿನ ಬಗ್ಗೆ, ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವದ ಕುರಿತು ವಿಶೇಷ ಜಾಗೃತಿ ತರಗತಿಗಳನ್ನು ನಡೆಸಲಿದೆ" ಎಂದು ತಿಳಿಸಿದೆ.

Last Updated : Oct 5, 2021, 1:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.