ಶ್ರೀನಗರ (ಜಮ್ಮು-ಕಾಶ್ಮೀರ): ಶ್ರೀನಗರದ ಕರಣ್ ನಗರ ಪ್ರದೇಶದಲ್ಲಿ ಅಪರಿಚಿತ ಬಂದೂಕುಧಾರಿಗಳು ನಾಗರಿಕನೋರ್ವನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತನನ್ನು ಚೇತಾಬಾಲ್ ನಿವಾಸಿ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಈಟಿವಿ ಭಾರತಕ್ಕೆ ಪ್ರತಿಕ್ರಿಯೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಇಂದು ಸಂಜೆ 5.30ರ ಸುಮಾರಿಗೆ ಕರಣ್ ನಗರದ ಮದೀನಾ ಕಾಂಪ್ಲೆಕ್ಸ್ ಬಳಿ ಬಂದೂಕುಧಾರಿಗಳು ಅಬ್ದುಲ್ ರೆಹಮಾನ್ ಮೇಲೆ ಗುಂಡು ಹಾರಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಯುವಕನ ಬರ್ಬರ ಕೊಲೆ..ಯುವತಿ ಜೊತೆಗಿನ ಪ್ರೀತಿಯೇ ಹತ್ಯೆಗೆ ಕಾರಣವಾಯ್ತಾ?
ಕರಣ್‌ನಗರ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದು, ದಾಳಿಕೋರರನ್ನು ಹಿಡಿಯಲು ಶೋಧ ಕಾರ್ಯ ಆರಂಭಿಸಿದ್ದಾರೆ.