ETV Bharat / bharat

ಕೇಂದ್ರ ಬಜೆಟ್​ 2023: ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, 157 ಹೊಸ ನರ್ಸಿಂಗ್‌ ಕಾಲೇಜು ಸ್ಥಾಪನೆ - ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಈ ಬಾರಿಯ ಬಜೆಟ್​ ಮಂಡನೆಯಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

education
ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ
author img

By

Published : Feb 1, 2023, 12:59 PM IST

ನವದೆಹಲಿ: 2023ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಇಂದು ಮಂಡಿಸುತ್ತಿದ್ದಾರೆ. ಇದರಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದಾರೆ. ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದ್ದು, 2014 ರಿಂದ ಸ್ಥಾಪಿತಗೊಂಡ ಹೊಸ ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್‌ ಕಾಲೇಜು ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮ, ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಐಸಿಎಂಆರ್​ ಲ್ಯಾಬ್​ಗಳು ಸ್ಥಾಪನೆ ಸೇರಿದಂತೆ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಆರ್​ಬಿಐ ಮೂಲಕ ಪ್ರತ್ಯೇಕ ಪದವಿ ಶಿಕ್ಷಣಕ್ಕೆ ಅನುಮತಿಯನ್ನು ನೀಡಲಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆಗಾಗಿ 3 ಶ್ರೇಷ್ಠತೆಯ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಪ್ರಕಟಿಸಿದ್ದಾರೆ. ವೈದ್ಯಕೀಯ ಕಾಲೇಜು ಹಾಗೂ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.