ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ 2022-23ನೇ ಸಾಲಿನ ಕೇಂದ್ರ ಬಜೆಟ್ಗೆ ತರಹೇವಾರಿ ಪ್ರತಿಕ್ರಿಯೆ ವ್ಯಕ್ತವಾಗ್ತಿವೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದೊಂದು 'ಶೂನ್ಯ ಬಜೆಟ್' ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ನಿರ್ಮಲಾ ಸೀತಾರಾಮನ್ ತಿಕ್ಷ್ಣವಾದ ತಿರುಗೇಟು ನೀಡಿದ್ದಾರೆ.
ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ನಿರ್ಮಲಾ ಸೀತಾರಾಮನ್, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಜೆಟ್ನಲ್ಲಿನ ತರ್ಕಬದ್ಧ ವಿಷಯಗಳ ಬಗ್ಗೆ ಕೇಳಲು ನಾನು ಸದಾ ಸಿದ್ಧನಿದ್ದೇನೆ. ಆದರೆ, ಮಂಡನೆಯಾಗಿರುವ ಬಜೆಟ್ ಬಗ್ಗೆ ಓದದೇ ಟ್ವೀಟ್ ಮಾಡುವ ಪ್ರವೃತ್ತಿ ಒಳ್ಳೆಯದಲ್ಲ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಬಿಜೆಟ್ ಬಗ್ಗೆ ಸರಿಯಾಗಿ ಹೋಮ್ ವರ್ಕ್ ಮಾಡಿಲ್ಲ. ಹೀಗಾಗಿ, ಅವರಿಗೆ ಯಾವುದೇ ರೀತಿಯ ಮಾಹಿತಿ ಅರ್ಥವಾಗಿಲ್ಲ ಎಂದರು.
ಬಜೆಟ್ ಮಂಡನೆಯಾಗುತ್ತಿದ್ದಂತೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಬಜೆಟ್ನಲ್ಲಿ ದುಡಿಯುವ, ಮಧ್ಯಮ, ಬಡ, ಯುವ ಜನಾಂಗ, ರೈತರು ಹಾಗೂ ಅತಿಸಣ್ಣ ಸಮುದಾಯಕ್ಕೆ ಯಾವುದೇ ರೀತಿಯ ಯೋಜನೆ ಘೋಷಣೆ ಮಾಡಿಲ್ಲ.
ಇದೊಂದು ಶೂನ್ಯ ಬಜೆಟ್ ಎಂದಿದ್ದರು. ಇದರ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಕೂಡ ಇದೊಂದು ಶೂನ್ಯ ಬಜೆಟ್ ಆಗಿದ್ದು, ದುಡಿಯುವ ಹಾಗೂ ಮಧ್ಯಮ ವರ್ಗದವರಿಗೆ ಯಾವುದೇ ಪರಿಹಾರ ಘೋಷಣೆ ಮಾಡದೇ ದ್ರೋಹ ಮಾಡಲಾಗಿದೆ ಎಂದು ತಿಳಿಸಿತ್ತು.
-
M0di G0vernment’s Zer0 Sum Budget!
— Rahul Gandhi (@RahulGandhi) February 1, 2022 " class="align-text-top noRightClick twitterSection" data="
Nothing for
- Salaried class
- Middle class
- The poor & deprived
- Youth
- Farmers
- MSMEs
">M0di G0vernment’s Zer0 Sum Budget!
— Rahul Gandhi (@RahulGandhi) February 1, 2022
Nothing for
- Salaried class
- Middle class
- The poor & deprived
- Youth
- Farmers
- MSMEsM0di G0vernment’s Zer0 Sum Budget!
— Rahul Gandhi (@RahulGandhi) February 1, 2022
Nothing for
- Salaried class
- Middle class
- The poor & deprived
- Youth
- Farmers
- MSMEs
ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ