ETV Bharat / bharat

PM Vishwakarma Scheme: ₹13 ಸಾವಿರ ಕೋಟಿ ವೆಚ್ಚದ 'ಪಿಎಂ ವಿಶ್ವಕರ್ಮ ಯೋಜನೆ'ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ - ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Union Cabinet Meeting outcome: ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ. ಇದು ವಿವಿಧ ವೃತ್ತಿಗಳ ಕೌಶಲ್ಯಾಧರಿತ ಕುಶಲಕರ್ಮಿಗಳಿಗೆ ಸಹಾಯಧನ ನೀಡುತ್ತದೆ.

ಪಿಎಂ ವಿಶ್ವಕರ್ಮ ಯೋಜನೆ
ಪಿಎಂ ವಿಶ್ವಕರ್ಮ ಯೋಜನೆ
author img

By

Published : Aug 16, 2023, 5:25 PM IST

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ 77ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 'ಪಿಎಂ ವಿಶ್ವಕರ್ಮ ಯೋಜನೆ'ಗೆ ಕೇಂದ್ರ ಸಚಿವ ಸಂಪುಟ ಇಂದು (ಬುಧವಾರ) ಅನುಮೋದನೆ ನೀಡಿದೆ. 13 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಜಾರಿಯಾಗಲಿದ್ದು, ಕೌಶಲ್ಯಾಧರಿತ ಕುಶಲಕರ್ಮಿಗಳಿಗೆ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಸಿಗಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, "ದೇಶದ ಗ್ರಾಮೀಣ ಮತ್ತು ನಗರ ಪ್ರದೇಶದ ಸಾಂಪ್ರದಾಯಿಕ ಕುಶಲಕರ್ಮಿಗಳ ಸಲುವಾಗಿ 13,000 ಕೋಟಿ ರೂಪಾಯಿ ಗಾತ್ರದ ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಯನ್ನು ಘೋಷಿಸಿದ್ದರು" ಎಂದರು.

"ನೇಕಾರರು, ಅಕ್ಕಸಾಲಿಗರು, ಅಗಸರು, ಕ್ಷೌರಿಕರು ಸೇರಿದಂತೆ ವಿವಿಧ ವೃತ್ತಿಗಳನ್ನು ನಡೆಸುವ ಕುಟುಂಬಗಳು ವಿಶ್ವಕರ್ಮ ಯೋಜನೆ ಮೂಲಕ ಸಬಲೀಕರಣ ಸಾಧಿಸಲು ಈ ಯೋಜನೆಯಡಿ 1 ಲಕ್ಷ ರೂ.ದವರೆಗಿನ ಸಾಲ ನೀಡಲಾಗುವುದು. ಈ ಯೋಜನೆಯು ಸಾಂಪ್ರದಾಯಿಕ ಕೌಶಲಗಳನ್ನು ಹೊಂದಿರುವ ಜನರ ಪ್ರಗತಿಯ ಉದ್ದೇಶ ಹೊಂದಿದೆ" ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಏನಿದು ಪಿಎಂ ವಿಶ್ವಕರ್ಮ ಯೋಜನೆ?: ದೇಶದ ಗ್ರಾಮೀಣ ಮತ್ತು ನಗರ ಪ್ರದೇಶದ ಬಡಗಿ, ಕ್ಷೌರಿಕ, ಅಕ್ಕಸಾಲಿಗ, ಅಗಸರು, ಕಲ್ಲು ಕೆಲಸ ಮಾಡುವವರು ಸೇರಿದಂತೆ ವಿವಿಧ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ 13.5 ಕೋಟಿ ಇತರ ಹಿಂದುಳಿದ ವರ್ಗಗಳ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಅವರ ಕೆಲಸಗಳಲ್ಲಿ ಇನ್ನಷ್ಟು ಅವಕಾಶಗಳನ್ನು ಸೃಷ್ಟಿಸಿ ಜೀವನವನ್ನು ಉತ್ತಮಪಡಿಸುವುದಾಗಿದೆ. ಇದರಡಿ 1 ಲಕ್ಷದವರೆಗೂ ಸಾಲ ಸೌಲಭ್ಯ ಸಿಗಲಿದ್ದು, ಸಹಾಯಧನವನ್ನು ಬಳಸಿಕೊಂಡು ವೃತ್ತಿಯಲ್ಲಿ ಪ್ರಗತಿ ಸಾಧಿಸುವಂತೆ ಮಾಡುವುದೇ ಯೋಜನೆಯ ಉದ್ದೇಶ.

ವಿಶ್ವಕರ್ಮ ಜಯಂತಿಯಂದು ಚಾಲನೆ: ಕೆಂಪುಕೋಟೆಯ ಮೇಲೆ ನಿಂತು ಸ್ವಾತಂತ್ರ್ಯ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸಾಂಪ್ರದಾಯಿಕ ಕುಶಲಕರ್ಮಿಗಳ ನುರಿತ ವ್ಯಕ್ತಿಗಳಿಗೆ ವಿಶೇಷವಾಗಿ ಒಬಿಸಿ ಸಮುದಾಯದ ಜನರಿಗಾಗಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಸೆ. 17 ರಂದು ವಿಶ್ವಕರ್ಮ ಜಯಂತಿ ದಿನದಂದು ಜಾರಿ ಮಾಡಲಾಗುವುದು ಎಂದು ಘೋಷಿಸಿದರು. ಇದರ ಇನ್ನೂ ನಾಲ್ಕು ವಿಶೇಷ ಯೋಜನೆಗಳ ಬಗ್ಗೆಯೂ ಪ್ರಕಟಿಸಿದರು.

ಇದನ್ನೂ ಓದಿ: BJP Meeting: ಪಂಚ ರಾಜ್ಯಗಳ ಚುನಾವಣೆ: ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ- ಮೋದಿ, ಅಮಿತ್​ ಶಾ ಭಾಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.