ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದೇಶದ ಏಳು ರಾಜ್ಯಗಳಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣ ಮಾಡಲು 4,445 ಕೋಟಿ ರೂ.ಗೆ ಸಂಪುಟದ ಅನುಮೋದನೆ ಸಿಕ್ಕಿದೆ. ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಪಿಯೂಷ್ ಗೊಯಲ್ ಹಾಗೂ ಅನುರಾಗ್ ಠಾಕೂರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
-
Union Cabinet approves setting up of 7 PM Mega Integrated Textile Region & Apparel (PM MITRA) parks with a total outlay of Rs 4,445 crores over 5 years. Move inspired by 5F vision of PM Modi - Farm to Fibre to Factory to Fashion to Foreign: Union Commerce Minister Piyush Goyal pic.twitter.com/AkXHUP5xxO
— ANI (@ANI) October 6, 2021 " class="align-text-top noRightClick twitterSection" data="
">Union Cabinet approves setting up of 7 PM Mega Integrated Textile Region & Apparel (PM MITRA) parks with a total outlay of Rs 4,445 crores over 5 years. Move inspired by 5F vision of PM Modi - Farm to Fibre to Factory to Fashion to Foreign: Union Commerce Minister Piyush Goyal pic.twitter.com/AkXHUP5xxO
— ANI (@ANI) October 6, 2021Union Cabinet approves setting up of 7 PM Mega Integrated Textile Region & Apparel (PM MITRA) parks with a total outlay of Rs 4,445 crores over 5 years. Move inspired by 5F vision of PM Modi - Farm to Fibre to Factory to Fashion to Foreign: Union Commerce Minister Piyush Goyal pic.twitter.com/AkXHUP5xxO
— ANI (@ANI) October 6, 2021
2021-22ರ ಕೇಂದ್ರ ಬಜೆಟ್ ವೇಳೆ ದೇಶದ ವಿವಿಧ ರಾಜ್ಯಗಳಲ್ಲಿ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣ ಮಾಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಇದೀಗ ಅದಕ್ಕಾಗಿ ಪಿಎಂ ಮಿತ್ರಾ ಯೋಜನೆಯಲ್ಲಿ ಅನುಮೋದನೆ ನೀಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆ ಆರಂಭಗೊಳ್ಳಲಿವೆ.
ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣಕ್ಕಾಗಿ ತಮಿಳುನಾಡು, ಕರ್ನಾಟಕ, ಪಂಜಾಬ್, ಒಡಿಶಾ, ಆಂಧ್ರಪ್ರದೇಶ, ಗುಜರಾತ್, ರಾಜಸ್ಥಾನ, ಅಸ್ಸೋಂ, ಮಧ್ಯಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳು ಆಸಕ್ತಿ ತೋರಿಸಿವೆ. ಪ್ರತಿ ಟೆಕ್ಸ್ಟೈಲ್ ಪಾರ್ಕ್ 1000 + ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿದ್ದು, ಈ ಯೋಜನೆಗಳಿಂದ 7 ಲಕ್ಷ ಜನರಿಗೆ ನೇರವಾಗಿ ಹಾಗೂ 14 ಲಕ್ಷ ಜನರಿಗೆ ಪರೋಕ್ಷವಾಗಿ ಕೆಲಸ ಸಿಗಲಿದೆ.
ಇದನ್ನೂ ಓದಿರಿ: ಲಖಿಂಪುರ್ ಹಿಂಸಾಚಾರ: ಮೃತ ಕುಟುಂಬಕ್ಕೆ ಪಂಜಾಬ್, ಛತ್ತೀಸ್ಗಢ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ
ರೈಲ್ವೆ ಇಲಾಖೆ ಸಿಬ್ಬಂದಿಗಳಿಗೆ ಬಿಗ್ ಗಿಫ್ಟ್
ಇಂದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರೈಲ್ವೆ ಇಲಾಖೆ ಸಿಬ್ಬಂದಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದೆ. ದೀಪಾವಳಿ ಹಬ್ಬದ ನಿಮಿತ್ತ ಸುಮಾರು 78 ದಿನಗಳ ಬೋನಸ್ ನೀಡಲು ನಿರ್ಧರಿಸಿದೆ. ಇದಕ್ಕಾಗಿ ಕೇಂದ್ರ 1,984.73 ಕೋಟಿ ರೂ. ಖರ್ಚು ಮಾಡಲಿದೆ. ಇದರಿಂದ 11.56 ಲಕ್ಷ ರೈಲ್ವೆ ಸಿಬ್ಬಂದಿ ಫಲಾನುಭವಿಗಳಾಗಲಿದ್ದಾರೆ.