ನವದೆಹಲಿ: ಕೋವಿಡ್ ವ್ಯಾಕ್ಸಿನ್ ತೆಗೆದುಕೊಂಡು ಯಾವುದೇ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಖಚಿತಪಡಿಸಿದ್ದು, ಇದೇ ವಿಷಯವಾಗಿ ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಗ್ನಿ ಮಾತನಾಡಿ, ಇಲ್ಲಿಯವರೆಗೆ 23,28,779 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಇಂದು ಕೂಡ 2,99,299 ಮಂದಿ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಲಸಿಕೆ ಪಡೆದುಕೊಂಡು ಆಸ್ಪತ್ರೆಗೆ 16 ಜನರು ದಾಖಲಾಗಿದ್ದು, ಇದರಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ಸಾವು ಕೋವಿಡ್ ವ್ಯಾಕ್ಸಿನ್ ತೆಗೆದುಕೊಂಡಿದ್ದರಿಂದ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದು, ಬೇರೆ ಕಾಯಿಲೆಗಳಿಂದ ಅವರು ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಓದಿ: ಕೇಂದ್ರ ಸರ್ಕಾರದಿಂದ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಮಿತಿಗೆ ಸಡಿಲಿಕೆ: ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ?
ದೇಶದಲ್ಲಿ ಕೊರೊನಾ ವೈರಸ್ಗೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಈ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.