ETV Bharat / bharat

ಕಾಶ್ಮೀರ ಬಿಟ್ಟು ಹೋಗುತ್ತಿರುವ ಪಂಡಿತರು.. ದೋವಲ್​ ಸೇರಿ ಹಲವು ಅಧಿಕಾರಿಗಳಿಗೆ ಅಮಿತ್​ ಶಾ ಬುಲಾವ್​!

author img

By

Published : Jun 3, 2022, 1:40 PM IST

ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಕಾಶ್ಮೀರಿ ಪಂಡಿತ ಮಹಿಳೆಯೋರ್ವಳನ್ನ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸಂಬಂಧ ಇಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ..

Union Home Minister Amit Shah to hold a meeting today, meeting is called by Amit Shah, meeting is called in backdrop of recent targeted killings in Kashmir, Union Home Minister Amit Shah news, ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ, ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಉದ್ದೇಶಿತ ಹತ್ಯೆಗಳ ಹಿನ್ನೆಲೆ ಸಭೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿ,
ಅಮಿತ್​ ಶಾ

ನವದೆಹಲಿ : ಹಲವು ದಿನಗಳಿಂದ ಕಾಶ್ಮೀರ್​ದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಕಳೆದ ತಿಂಗಳಿನಲ್ಲಿ ಉಗ್ರರಿಂದ ಉದ್ದೇಶಿತ ಹತ್ಯೆಗಳ ನಡೆಯುತ್ತಿವೆ. ಹೀಗಾಗಿ, ಇಲ್ಲಿನ ಪಂಡಿತರು ತಮ್ಮ ಸ್ಥಳವನ್ನು ತೊರೆದು ಸುರಕ್ಷಿತ ಜಾಗಕ್ಕೆ ತೆರಳಲು ಇಚ್ಛಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ಓದಿ: ಶಿಕ್ಷಕಿ ರಜನಿ ಬಾಲಾ ಅಂತ್ಯಕ್ರಿಯೆ.. ಅಧಿಕಾರಿಗಳನ್ನು ವಜಾಗೊಳಿಸುವಂತೆ ರಸ್ತೆಯಲ್ಲಿ ಬೃಹತ್​ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಕಣಿವೆಯಲ್ಲಿ ಭಯೋತ್ಪಾದಕರು ಉದ್ದೇಶಿತ ಹತ್ಯೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು 2ನೇ ಬಾರಿ ಮಹತ್ವದ ಸಭೆ ನಡೆಯಲಿದೆ.

ಈ ಹಿಂದೆ ಕಾಶ್ಮೀರದಲ್ಲಿ ಬ್ಯಾಂಕ್ ಉದ್ಯೋಗಿಯಾಗಿ ಹಿಂದೂವೊಬ್ಬರು ಹತ್ಯೆಯಾಗಿದ್ದರು. ಆ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಇನ್ನಿತರ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು.

ಓದಿ: ಶಿಕ್ಷಕಿ ಕೊಲೆ ಬೆನ್ನಲ್ಲೇ ಬ್ಯಾಂಕ್ ಮ್ಯಾನೇಜರ್​ಗೆ​ ಗುಂಡಿಕ್ಕಿ ಹತ್ಯೆಗೈದ ಉಗ್ರ... ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಇಂದು ಸಹ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಕಾಶ್ಮೀರಿ ಪಂಡಿತ್​ರ ಹತ್ಯೆಗಳು, ಭದ್ರತಾ ಸ್ಥಿತಿ-ಗತಿ, ಕಣಿವೆ ತೊರೆಯುತ್ತಿರುವ ಕಾಶ್ಮೀರಿ ಪಂಡಿತ​ರ ಮನವೊಲಿಸುವ ಕಾರ್ಯ, ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳ ಬಂದ್​ ಆಗಿದ್ದ ಅಮರನಾಥ ಯಾತ್ರೆಯ ಭದ್ರತಾ ವ್ಯವಸ್ಥೆಗಳ ಕುರಿತು ನಾಯಕರು ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.