ETV Bharat / bharat

ಪಶ್ಚಿಮ ಬಂಗಾಳದಲ್ಲಿ ರಂಗೇರಿದ ಚುನಾವಣಾ ಕಾವು: ಬಿರುಸಿನ ಪ್ರಚಾರದಲ್ಲಿ ಪಕ್ಷಗಳು - ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪ್ರಚಾರ

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಏರುತ್ತಲೇ ಇದ್ದು, ಟಿಎಂಸಿ, ಬಿಜೆಪಿ, ಕಾಂಗ್ರೆಸ್​​​​ ಹಾಗೂ ಎಡಪಕ್ಷಗಳ ನಾಯಕರು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ.

BJP leader
ಅಮಿತ್​ ಶಾ
author img

By

Published : Apr 7, 2021, 4:29 PM IST

ಕೋಲ್ಕತ್ತಾ( ಪಶ್ಚಿಮ ಬಂಗಾಳ)​: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಏರುತ್ತಲೇ ಇದೆ. ಈಗಾಗಲೇ ಮೂರು ಹಂತದ ಮತದಾನ ಮುಕ್ತಾಯವಾಗಿದ್ದು, ಇನ್ನೂ ಐದು ಹಂತದ ಚುನಾವಣೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಟಿಎಂಸಿ, ಬಿಜೆಪಿ, ಕಾಂಗ್ರೆಸ್​​​​ ಹಾಗೂ ಎಡಪಕ್ಷಗಳ ನಾಯಕರು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಹೈವೋಲ್ಟೇಜ್​​ ಬಂಗಾಳ ಕಣದಲ್ಲಿ ಬಿಜೆಪಿ ಈ ಬಾರಿ ಅಧಿಕಾರ ಹಿಡಿದೇ ತೀರಬೇಕು ಎಂಬ ಉಮೇದಿನಲ್ಲಿದೆ. ಹೀಗಾಗಿ ಕೇಂದ್ರ ಗೃಹ ಸಚಿವರು ಹಾಗೂ ಹಿಂದಿನ ಅಧ್ಯಕ್ಷರಾಗಿರುವ ಅಮಿತ್​ ಶಾ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಹೌರಾದ ದೋಮ್ಜೂರ್​​ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಜಿಬ್​​ ಬ್ಯಾನರ್ಜಿ ಪರ ಬಿರುಸಿನ ಪ್ರಚಾರ ನಡೆಸಿದರು.

ಮತ್ತೊಂದೆಡೆ ಅಮಿತ್​ ಶಾ ಅವರು, ಕಾರ್ಯಕರ್ತರ ಮನೆಯಲ್ಲಿ ಭೋಜನ ಮಾಡುವ ತಮ್ಮ ಕಾರ್ಯಕ್ರಮವನ್ನು ಮುಂದುವರೆಸಿದ್ದಾರೆ. ಇಂದೂ ಕೂಡಾ ಬಡ ಕಾರ್ಯಕರ್ತರೊಬ್ಬರ ಮನೆಯಲ್ಲಿ ಊಟ ಸವಿದು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ

ಕೂಚ್​ ಬೆಹಾರ್​​ನಲ್ಲಿ ಸಿಎಂ ಮಮತಾ ಬಿರುಸಿನ ಕ್ಯಾಂಪೇನ್​

ಮತ್ತೊಂದು ಕಡೆ ಕೂಚ್​​​ ಬೆಹಾರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು. ನಾವು ಮುಕ್ತ ಮತ್ತು ನ್ಯಾಯಸಮ್ಮತ ಬಯಸುತ್ತಿದ್ದೇವೆ. ಹಾಗಾಗಿ ಚುನಾವಣಾ ಆಯೋಗ ಜನರು ಭಯಮುಕ್ತ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನಾವು ಸಿಆರ್​ಪಿಎಫ್​ ಜವಾನರನ್ನು ಗೌರವಿಸುತ್ತೇವೆ. ಆದರೆ ಬಿಜೆಪಿ ಸಿಆರ್​ಪಿಎಫ್​ ಜವಾನರನ್ನು ಗೌರವಿಸಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.