ಜಮ್ಮು(ಜಮ್ಮು ಕಾಶ್ಮೀರ): ಒಟ್ಟು 257 ಕಿಮೀ ಉದ್ದದ 25 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಬುಧವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
11,721 ಕೋಟಿ ರೂಪಾಯಿ ಮೊತ್ತದ ಯೋಜನೆಗಳು ಇದಾಗಿದ್ದು, ಈ ಯೋಜನೆಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಎಲ್ಲ ಋತುಗಳಲ್ಲೂ ಸಂಪರ್ಕ ಸಾಧಿಸಲು ನೆರವಾಗುತ್ತವೆ. ಅಷ್ಟೇ ಅಲ್ಲದೇ ಕೃಷಿ, ಕೈಗಾರಿಕಾ ಮತ್ತು ಸಾಮಾಜಿಕ - ಆರ್ಥಿಕ ಅಭಿವೃದ್ಧಿ ಹಾಗೂ ರಕ್ಷಣಾ ಪಡೆಗಳ ತ್ವರಿತ ಚಲನೆಗೂ ಈ ಹೆದ್ದಾರಿಗಳು ಸಹಕಾರಿಯಾಗಲಿವೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.
ಈ ಹೆದ್ದಾರಿ ಯೋಜನೆಗಳು ಜಮ್ಮು ಕಾಶ್ಮೀರದ ವಿವಿಧ ಜಿಲ್ಲ ಕೇಂದ್ರಗಳಿಗೆ ಹೋಗುವ ಎಲ್ಲ ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವುದು ಮಾತ್ರವಲ್ಲ. ಆ ಪ್ರದೇಶದಲ್ಲಿ ಸ್ವಯಂ ಉದ್ಯೋಗಾವಕಾಶಗಳ ಸೃಷ್ಟಿಗೆ ಸಹಾಯ ಮಾಡುತ್ತದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ಎರಡು ತಿಂಗಳಲ್ಲಿ 30ಕ್ಕೂ ಹೆಚ್ಚು ಕೇಂದ್ರ ಸಚಿವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಗಮನಾರ್ಹ ಅಭಿವೃದ್ಧಿಯನ್ನು ಇತ್ತೀಚೆಗೆ ಕಾಣಿಸಿಕೊಳ್ಳುತ್ತಿದೆ.
ಇದನ್ನೂ ಓದಿ: Social mediaದಲ್ಲಿ ಭಾರಿ ಸದ್ದು ಮಾಡುತ್ತಿದೆ ಉದ್ದ ಕುತ್ತಿಗೆಯ ಶ್ವಾನದ ಫೋಟೋ