ETV Bharat / bharat

ಪೌರ ಕಾರ್ಮಿಕರ​ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ಮಹಿಳಾ ಪೌರ ಕಾರ್ಮಿಕರೊಬ್ಬರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಇನ್ನೊಬ್ಬ ಮಹಿಳೆಯ ಕೈಯಿಂದಲೇ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Union Minister Jyotiraditya Scindia touches feet of woman sweeper
ಸ್ವೀಪರ್​ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
author img

By

Published : Mar 27, 2022, 12:13 PM IST

ಗ್ವಾಲಿಯರ್ (ಮಧ್ಯಪ್ರದೇಶ): ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅಭಿನಂದನಾ ಸಮಾರಂಭವೊಂದರಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದರು. ಇದೇ ವೇಳೆ ಆ ಮಹಿಳೆಯನ್ನು ಅಪ್ಪಿಕೊಂಡು ಕೃತಜ್ಞತೆ ಸಲ್ಲಿಸಿದರು. ವೇದಿಕೆಯಿಂದ ಕೆಳಗಿಳಿದ ಸಚಿವರು, ಮತ್ತೊಬ್ಬ ಮಹಿಳಾ ಪೌರ ಕಾರ್ಮಿಕೆಯ ಕೈ ಹಿಡಿದು ವೇದಿಕೆಗೆ ಕರೆತಂದರು.

ಈ ಸಂದರ್ಭದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮ ಆರಂಭಿಸುವಂತೆ ಹೇಳಿ ನಂತರ ಆಕೆಯನ್ನು ವೇದಿಕೆಯ ತಮ್ಮ ಪಕ್ಕದ ಆಸನದಲ್ಲಿ ಕೂರಿಸಿದರು. ಕಾರ್ಯಕ್ರಮದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ಗ್ಲೌಸ್, ಶೂ, ಕ್ಯಾಪ್, ಜಾಕೆಟ್‌ಗಳು, ಸುರಕ್ಷತಾ ಸಾಧನಗಳು ಸೇರಿದಂತೆ ಆರೋಗ್ಯ ಕಾರ್ಡುಗಳನ್ನು ವಿತರಿಸಲಾಯಿತು. ಬಳಿಕ ಪೌರ ಕಾರ್ಮಿಕ ಸೇವೆಯನ್ನು ಶ್ಲಾಘಿಸಿದರು.

ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶದ ಪಿತಾಮಹ ಮಹಾತ್ಮಾ ಗಾಂಧೀಜಿ ದಾರಿಯಲ್ಲಿ ಸಾಗುತ್ತಿರುವಾಗ ಸಫಾಯಿ ಕರ್ಮಚಾರಿಗಳನ್ನು ಪ್ರೋತ್ಸಾಹಿಸುವುದು, ಪ್ರೇರೇಪಿಸುವುದು ನಮ್ಮ ಕರ್ತವ್ಯ. ಅವರು 'ಸಫಾಯಿ ದೇವತಾ'ಗಳು ಎಂದು ಸಿಂಧಿಯಾ ಬಣ್ಣಿಸಿದರು.

ಇದನ್ನೂ ಓದಿ: ಎರಡು ವರ್ಷದ ನಂತರ ಇಂದಿನಿಂದ ಅಂತರರಾಷ್ಟ್ರೀಯ ವಿಮಾನಯಾನ ಪುನಾರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.