ETV Bharat / bharat

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೋವಿಡ್-19 ಪಾಸಿಟಿವ್ - ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮಂಗಳವಾರ ಕೊರೊನಾ ಸೋಂಕು ದೃಢಪಟ್ಟಿದೆ. ತನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಪರೀಕ್ಷೆಗೆ ಒಳಗಾಗುವಂತೆ ಅವರು ಮನವಿ ಮಾಡಿದ್ದಾರೆ.

Union Minister Nitin Gadkari
ಕೇಂದ್ರ ಸಚಿವ ನಿತಿನ್ ಗಡ್ಕರಿ
author img

By

Published : Jan 12, 2022, 8:43 AM IST

ನವದೆಹಲಿ: ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಸದ್ಯ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಈ ಕುರಿತು ಟ್ವೀಟ್​​ ಮಾಡಿರುವ ಅವರು, 'ನನಗೆ ಸೋಂಕಿನ ಸೌಮ್ಯ ಲಕ್ಷಣಗಳಿವೆ ಹಾಗೂ ಕೋವಿಡ್‌–19 ದೃಢಪಟ್ಟಿದೆ. ಅಗತ್ಯವಿರುವ ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದೇನೆ, ನಾನು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದೇನೆ'. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪ್ರತ್ಯೇಕವಾಗಿ ವಾಸಿಸುವ ಜತೆಗೆ ಪರೀಕ್ಷೆಗೆ ಒಳಗಾಗುವಂತೆ ಟ್ವೀಟ್​​​ನಲ್ಲಿ ತಿಳಿಸಿದ್ದಾರೆ.

  • I have tested positive for Covid 19 today with mild symptoms. Following all the necessary protocols, I have isolated myself and I am under home quarantine. I request all those who have come in contact with me to isolate themselves and get tested.

    — Nitin Gadkari (@nitin_gadkari) January 11, 2022 " class="align-text-top noRightClick twitterSection" data=" ">

ದೇಶದಲ್ಲಿ ಒಮಿಕ್ರಾನ್​​ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆ ದೇಶಾದ್ಯಂತ ಹಲವು ಮುಖಂಡರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಕೇಂದ್ರದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸೇರಿದಂತೆ ಹಲವು ರಾಜಕೀಯ ನಾಯಕರಲ್ಲಿ ಇತ್ತೀಚೆಗೆ ಸೋಂಕು ‌ ದೃಢಪಟ್ಟಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,68,063 ಹೊಸ ಕೋವಿಡ್​​ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಈವರೆಗೆ 4,461 ಒಮಿಕ್ರಾನ್​​ ಪ್ರಕರಣಗಳು ವರದಿಯಾಗಿವೆ. ದೈನಂದಿನ ಪಾಸಿಟಿವಿಟಿ ದರ ಶೇ.10.64 ರಷ್ಟಿದೆ.

ಇದನ್ನೂ ಓದಿ: ಲಕ್ಷದ್ವೀಪದಲ್ಲಿ 15 ರಿಂದ 18 ವರ್ಷದೊಳಗಿನವರಿಗೆ ಶೇ.100ರಷ್ಟು ಕೋವಿಡ್‌ ಲಸಿಕೆ ಪೂರ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.