ನವದೆಹಲಿ: ರಾಜ್ಯದಲ್ಲಿ ದಿನವೊಂದಕ್ಕೆ 40 ಸಾವಿರ ಪಾಸಿಟಿವ್ ಕೇಸ್ಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಅತ್ಯಂತ ಹೆಚ್ಚು ಪಾಸಿಟಿವ್ ಕೇಸ್ಗಳು ವರದಿಯಾಗುತ್ತಿವೆ. ದಿನವೊಂದಕ್ಕೆ 200ಕ್ಕೂ ಹೆಚ್ಚು ಜನ ಕೋವಿಡ್ಗೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಇರುವ ಸೇನಾ ಆಸ್ಪತ್ರೆಗಳನ್ನು ತಾತ್ಕಾಲಿಕ ಕೋವಿಡ್ ಕೇರ್ ಸೆಂಟರ್ಗಳನ್ನಾಗಿ ಮಾಡುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕೋವಿಡ್ ಪರಿಹಾರ ನಿಧಿಗೆ ಸಚಿವರು, ಶಾಸಕರ ವೇತನ ದೇಣಿಗೆ ನೀಡಲು ನಿರ್ಧಾರ