ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೂ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿಂದು ಸರ್ವಪಕ್ಷ ಸಭೆ ನಡೆಯಿತು. ಈ ವೇಳೆ ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚೆಯಾಯಿತು ಎಂಬ ವಿಷಯವಾಗಿ ಕೇಂದ್ರ ಸಂಸತ್ತಿನ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದಾರೆ.
ಇದನ್ನೂ ಓದಿ: ಕೇರಳದಿಂದ ಹೊಸದೊಂದು ದಾಖಲೆ.. 43 ಲಕ್ಷ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲ ಪಕ್ಷದ ಮುಖಂಡರು ಭಾಗಿಯಾಗಿದ್ದರು. ಲೋಕಸಭೆಯಲ್ಲಿ ಮಂಡನೆಯಾಗುವ ಬಿಲ್, ನೂತನ ಕೃಷಿ ಕಾಯ್ದೆಗಳು ಹಾಗೂ ರೈತರ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆ ನಡೆಸಲು ಅವಕಾಶ ನೀಡುವಂತೆ ವಿಪಕ್ಷಗಳು ಕೇಳಿಕೊಂಡಿದ್ದು, ಅದಕ್ಕೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಈಗಾಗಲೇ ರೈತ ಸಂಘಟನೆ ಜತೆ ಕೇಂದ್ರ ಕೃಷಿ ಸಚಿವರು ಚರ್ಚೆ ನಡೆಸಿದ್ದು, ಹೊಸ ಕಾಯ್ದೆಗಳನ್ನ ಅಮಾನತಿನಲ್ಲಿಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಸರ್ಕಾರ ಈ ಆಫರ್ಗೆ ಈಗಲೂ ಬದ್ಧವಾಗಿದ್ದು, ರೈತ ಸಂಘಟನೆಗಳ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇಂದು ಅಮೆರಿಕದಲ್ಲೂ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಲಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು. ಇದರ ಜತೆಗೆ ಭಾರತ ಎಲ್ಲ ದೇಶಗಳಿಗೂ ಹೆಚ್ಚಿನ ಕೊಡುಗೆ ನೀಡುತ್ತಿದ್ದು, ವ್ಯಾಕ್ಸಿನ್ ವಿಚಾರದಲ್ಲಿ ಇದು ಸಾಭೀತುಗೊಂಡಿದೆ. ಹೀಗಾಗಿ ಎಲ್ಲ ಪಕ್ಷಗಳು ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದರು ಎಂದಿದ್ದಾರೆ.