ಬಾಲಸೋರ್(ಒಡಿಶಾ): ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವ ಪ್ರತಾಪ್ ಚಂದ್ರ ಸಾರಂಗಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಸಚಿವರು ಸಣ್ಣ-ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯ ನೀಲಗಿರಿ ಪ್ರದೇಶದಲ್ಲಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ತಕ್ಷಣವೇ ಸಚಿವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಸಾರಂಗಿ ಅವರ ಕಾರು ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಸಚಿವರೊಂದಿಗೆ ಕಾರಿನಲ್ಲಿದ್ದ ಅವರ ಪಿಎ ಹಾಗೂ ಚಾಲಕನಿಗೂ ಗಾಯಗಳಾಗಿವೆ. ಪ್ರತಾಪ್ ಚಂದ್ರ ಸಾರಂಗಿ ಪ್ರಧಾನಿ ಮೋದಿ ಸಂಪುಟದಲ್ಲಿ ಪಶುಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಖಾತೆ ಸಚಿವರಾಗಿದ್ದಾರೆ.