ಮುಂಬೈ: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಧ್ವನಿ ಎತ್ತದ ಅಮಿತಾಬ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಅವರ ಯಾವುದೇ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಂಪಿಸಿಸಿ ಅಧ್ಯಕ್ಷ ನಾನಾ ಪಟೋಲೆ ಹೇಳಿಕೆಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ತಿರುಗೇಟು ನೀಡಿದ್ದಾರೆ.
ಕೇಂದ್ರದಿಂದ ಇಂಧನ ಬೆಲೆ ಏರಿಕೆ ವಿರುದ್ಧ ಟ್ವೀಟ್ ಮಾಡಿಲ್ಲ ಎಂಬ ಕಾರಣಕ್ಕೆ ಅಕ್ಷಯ್ ಕುಮಾರ್ ಮತ್ತು ಅಮಿತಾಬ್ ಬಚ್ಚನ್ ಅವರಿಗೆ ಕಾಂಗ್ರೆಸ್ ನಾನಾ ಪಟೋಲೆ ಬೆದರಿಕೆ ಹಾಕುವುದು ಸರಿಯಲ್ಲ. ನನ್ನ ಪಕ್ಷ ಅವರೊಂದಿಗೆ ಇದೆ. ಅವರ ಚಿತ್ರೀಕರಣಕ್ಕೆ ಕಾಂಗ್ರೆಸ್ ಬೆದರಿಕೆ ಹಾಕಿದರೆ, ನಾವು ಅವರಿಗೆ ರಕ್ಷಣೆ ನೀಡುತ್ತೇವೆ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.
ಇದನ್ನೂ ಓದಿ: ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ 50 ಅಡಿ ಬಾವಿಗೆ ಬಿದ್ದ ಯುವತಿ - ಮುಂದೇನಾಯ್ತು!?
ಕಾಂಗ್ರೆಸ್ ಅವಧಿಯಲ್ಲಿ ಪೆಟ್ರೋಲ್ - ಡೀಸೆಲ್ ಬೆಲೆ 60 ರೂಪಾಯಿ ತಲುಪಿದ್ದಾಗ ನಟ ಅಮಿತಾಬ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಮನ್ಮೋಹನ್ ಸಿಂಗ್ ಆಡಳಿತವನ್ನು ಟೀಕಿಸಿದ್ದರು. ಆದರೆ, ಈಗ ಪೆಟ್ರೋಲ್ ಬೆಲೆ 100ರ ಸನಿಹ ಬಂದಿದೆ. ಇಬ್ಬರೂ ಈ ವಿಚಾರದಲ್ಲಿ ಮೌನವಾಗಿದ್ದಾರೆ ಎಂದು ಎಂಪಿಸಿಸಿ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದರು. ಅಲ್ಲದೇ ಈ ನಟರ ಸಿನಿಮಾಗಳ ಶೂಟಿಂಗ್ ಮತ್ತು ಪ್ರದರ್ಶನವನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು.