ಲಖನೌ (ಉತ್ತರ ಪ್ರದೇಶ): ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಸೋದರಳಿಯನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ನಡೆದಿದೆ. ನಂದ ಕಿಶೋರ್ ಎಂಬುವವರೇ ಸಾವಿಗೆ ಶರಣಾಗಿದ್ದಾರೆ.
ಪ್ರಾಪರ್ಟಿ ಡೀಲರ್ ಆಗಿ ಕೆಲಸ ಮಾಡುತ್ತಿದ್ದ ನಂದ ಕಿಶೋರ್ ಲಖನೌದ ದುಬಗ್ಗದ ಬಿಗಾರಿಯಾ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೋಹನ್‌ಲಾಲ್‌ಗಂಜ್ ಕ್ಷೇತ್ರದ ಸಂಸದರಾದ ಕೌಶಲ್ ಕಿಶೋರ್, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಕುರಿತು ಮಾತನಾಡಿದ್ದ ಕೌಶಲ್ ಕಿಶೋರ್, ವಿದ್ಯಾವಂತ ಯುವತಿಯರು ಲಿವ್ ಇನ್ ರಿಲೇಷನ್ಶಿಪ್ಗಳ ಬಲೆಗೆ ಬೀಳ ಬರಬಾರದು ಎಂದು ಹೇಳುವ ಮೂಲಕ ಸುದ್ದಿಯಲ್ಲಿದ್ದರು.
ಇದನ್ನೂ ಓದಿ: ಪತ್ನಿ ಕೊಲೆಗೈದು ಕತ್ತರಿಸಿ ಹೊಲದಲ್ಲೆಸೆದ ಪಾಪಿ ಪತಿ!