ETV Bharat / bharat

ಬಿಜೆಪಿ ತ್ಯಜಿಸಿ ಸಮಾಜವಾದಿ ಪಕ್ಷ ಸೇರಿದ ಯುಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ - ಸ್ವಾಮಿ ಪ್ರಸಾದ್​ ಮೌರ್ಯ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಇದೀಗ ರಾಜ್ಯದಲ್ಲಿ ಬಿಜೆಪಿಗೆ ಬಹುದೊಡ್ಡ ಹೊಡೆತ ಬಿದ್ದಿದೆ. ಪಕ್ಷದ ಪ್ರಮುಖ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಸಮಾಜವಾದಿ ಪಕ್ಷ ಸೇರಿಕೊಂಡಿದ್ದಾರೆ.

Minister Swami Prasad Maurya resigns
Minister Swami Prasad Maurya resigns
author img

By

Published : Jan 11, 2022, 2:50 PM IST

Updated : Jan 11, 2022, 2:59 PM IST

ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್​​ ಆಗಿದೆ. ರಾಜ್ಯದ 403 ವಿಧಾನಸಭೆ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10ರಿಂದಲೇ ಮೊದಲ ಹಂತದ ಮತದಾನ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ವಿವಿಧ ಪಕ್ಷಗಳಿಂದ ಭರ್ಜರಿ ತಯಾರಿ ನಡೆಯುತ್ತಿದೆ.

ಇದೆಲ್ಲದರ ಮಧ್ಯೆ, ವಿವಿಧ ಪಕ್ಷಗಳಿಂದ ಪಕ್ಷಾಂತರ ಪರ್ವವೂ ಶುರುವಾಗಿದೆ. ಪ್ರಮುಖವಾಗಿ ಆಡಳಿತ ನಡೆಸುತ್ತಿರುವ ಯೋಗಿ ಸರ್ಕಾರಕ್ಕೆ ಇಂದು ಬಹುದೊಡ್ಡ ಏಟು ಬಿದ್ದಿದೆ.

  • दलितों, पिछड़ों, किसानों, बेरोजगार नौजवानों एवं छोटे-लघु एवं मध्यम श्रेणी के व्यापारियों की घोर उपेक्षात्मक रवैये के कारण उत्तर प्रदेश के योगी मंत्रिमंडल से इस्तीफा देता हूं। pic.twitter.com/ubw4oKMK7t

    — Swami Prasad Maurya (@SwamiPMaurya) January 11, 2022 " class="align-text-top noRightClick twitterSection" data=" ">

ಸಿಎಂ ಯೋಗಿ ಆದಿತ್ಯನಾಥ್​​ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಸ್ವಾಮಿ ಪ್ರಸಾದ್​ ಮೌರ್ಯ ಇದೀಗ ದಿಢೀರ್​ ಆಗಿ ರಾಜೀನಾಮೆ ನೀಡಿದ್ದು, ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಹೇಳಿದ್ದೇನು?

'ವಿಭಿನ್ನ ಸಿದ್ಧಾಂತಗಳ ಹೊರತಾಗಿ ಕೂಡ ನಾನು ಯೋಗಿ ಆದಿತ್ಯನಾಥ್​ ಸಂಪುಟದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡಿದ್ದೇನೆ. ಆದರೆ, ರಾಜ್ಯದಲ್ಲಿ ದಲಿತರು, ಹಿಂದುಳಿದ ವರ್ಗ, ರೈತರು, ನಿರುದ್ಯೋಗಿಗಳು ಮತ್ತು ಸಣ್ಣ ಉದ್ಯಮಿಗಳ ಮೇಲೆ ತೀವ್ರ ತರವಾದ ದಬ್ಬಾಳಿಕೆ ನಡೆಯುತ್ತಿದ್ದು ಇದರಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ' ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

  • सामाजिक न्याय और समता-समानता की लड़ाई लड़ने वाले लोकप्रिय नेता श्री स्वामी प्रसाद मौर्या जी एवं उनके साथ आने वाले अन्य सभी नेताओं, कार्यकर्ताओं और समर्थकों का सपा में ससम्मान हार्दिक स्वागत एवं अभिनंदन!

    सामाजिक न्याय का इंक़लाब होगा ~ बाइस में बदलाव होगा#बाइसमेंबाइसिकल pic.twitter.com/BPvSK3GEDQ

    — Akhilesh Yadav (@yadavakhilesh) January 11, 2022 " class="align-text-top noRightClick twitterSection" data=" ">

ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸೋನಭದ್ರ ಕ್ಷೇತ್ರದ ಬಿಜೆಪಿ ಶಾಸಕ ಸೇರಿದಂತೆ ಮೂವರು ಸಚಿವರು ಹಾಗೂ ಇತರೆ ಕೆಲವರು ಸಮಾಜವಾದಿ ಪಕ್ಷ ಸೇರಿಕೊಳ್ಳುವುದು ದಟ್ಟವಾಗಿದೆ ಎಂದು ತಿಳಿದುಬಂದಿದೆ.

ಬಿಎಸ್‌ಪಿ, ಬಿಜೆಪಿ ಈಗ ಸಮಾಜವಾದಿ ಪಕ್ಷಕ್ಕೆ ಜಂಪ್:

ಹಿಂದುಳಿದ ವರ್ಗದ ಪ್ರಬಲ ನಾಯಕನಾಗಿರುವ ಮೌರ್ಯ, ಈ ಹಿಂದೆ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಆದರೆ 2016ರಲ್ಲಿ ಬಿಜೆಪಿ ಸೇರಿದ್ದರು. ಇದೀಗ ಸಮಾಜವಾದಿ ಪಕ್ಷ ಸೇರಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೌರ್ಯ ಪೂರ್ವ ಉತ್ತರ ಪ್ರದೇಶದ ಪದ್ರೌನಾದಿಂದ ಆಯ್ಕೆಯಾಗಿದ್ದರು. ಇವರ ಪುತ್ರಿ ಸಂಘಮಿತ್ರಾ ಬಿಜೆಪಿ ಸಂಸದೆಯಾಗಿದ್ದಾರೆ.

Last Updated : Jan 11, 2022, 2:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.