ಲಖನೌ(ಉತ್ತರ ಪ್ರದೇಶ): ಪಂಚರಾಜ್ಯ ಚುನಾವಣೆಗಳ ಪೈಕಿ ಇಂದು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆಗೆ ಮತದಾನ ಆರಂಭವಾಗಿದೆ. 403 ಕ್ಷೇತ್ರಗಳ ಪೈಕಿ 11 ಜಿಲ್ಲೆಗಳ 58 ಕ್ಷೇತ್ರಗಳಲ್ಲಿ ವೋಟಿಂಗ್ ಆಗಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮತದಾರರಿಗೆ ವೋಟ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
![ಈ ಎಲ್ಲ ವಿಧಾನಸಭೆ ಕ್ಷೇತ್ರಗಳಿಗೆ ಇಂದು ಮತದಾನ](https://etvbharatimages.akamaized.net/etvbharat/prod-images/14422199_wdfdfdfdfd.jpg)
ಮುಜಾಫರ್ನಗರ, ಮೀರತ್, ಭಾಗಪತ್, ಗಾಜಿಯಾಬಾದ್, ಶಾಮ್ಲಿ, ಹಂಪೂರ್, ಗೌತಮ್ ಬುದ್ಧನಗರ, ಬುಲದ್ಶಹರ್, ಅಲಿಘಡ, ಆಗ್ರಾ ಮತ್ತು ಮಥುರಾದಲ್ಲಿ ಮತದಾನವಾಗಲಿದೆ. ಪಟ್ಟು 623 ಅಭ್ಯರ್ಥಿಗಳು ತಮ್ಮ ಭವಿಷ್ಯ ನಿರ್ಧರಿಸಿಕೊಳ್ಳಲಿದ್ದು, ಒಟ್ಟು 2.27 ಕೋಟಿ ಜನರು ಮತದಾನ ಮಾಡಲಿದ್ದಾರೆ.
![ಈ ಎಲ್ಲ ವಿಧಾನಸಭೆ ಕ್ಷೇತ್ರಗಳಿಗೆ ಇಂದು ಮತದಾನ](https://etvbharatimages.akamaized.net/etvbharat/prod-images/14422199_wdfdfdfw.jpg)
ಯೋಗಿ ಆದಿತ್ಯನಾಥ್ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ 9 ಸಚಿವರು ಕಣದಲ್ಲಿದ್ದು, ಇಂದು ಅವರ ಭವಿಷ್ಯ ನಿರ್ಧಾರವಾಗಲಿದೆ. ಇದರ ಜೊತೆಗೆ ರಾಷ್ಟ್ರೀಯ ಲೋಕದಳ ಮುಖ್ಯಸ್ಥ ಜಯಂತ್ ಚೌಧರಿ ಕೂಡ ಕಣದಲ್ಲಿದ್ದಾರೆ. ಈ ಹಿಂದೆ 2017ರಲ್ಲಿ ಚುನಾವಣೆಯಲ್ಲಿ 58 ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಾರ್ಟಿ 53 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿತ್ತು. ಈ ಭಾಗದಲ್ಲಿ ಜಾಟ್ ಸಮುದಾಯ ಪ್ರಬಲವಾಗಿದ್ದು, ಇದೇ ಕಾರಣಕ್ಕಾಗಿ ಬಿಜೆಪಿ 17 ಜಾಟ್ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಜಾರಿಗೆ ತಂದ ಬಳಿಕ ಈ ಭಾಗದ ಜನರು ಆಡಳಿತ ಪಕ್ಷ ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇದೇ ಕಾರಣಕ್ಕಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆದುಕೊಂಡಿತ್ತು. ಇದೀಗ ಜಾಟ್ ಸಮುದಾಯ ಯಾರಿಗೆ ಜೈಕಾರ ಹಾಕಲಿದ್ದಾರೆಂಬುದು ತೀವ್ರ ಕುತೂಹಲ ಮೂಡಿಸಿದೆ.
![ಇಂದು ಚುನಾವಣೆ ನಡೆಯಲಿರುವ ಎಲ್ಲ ಕ್ಷೇತ್ರಗಳ ಮಾಹಿತಿ](https://etvbharatimages.akamaized.net/etvbharat/prod-images/14422199_wdfdfdfd.jpg)
ಇದನ್ನೂ ಓದಿರಿ: ಪ್ರೇಮಿಗಳ ದಿನದಂದು ಮದುವೆಯಾಗಲಿದೆ ಟ್ರಾನ್ಸ್ಜೆಂಡರ್ ಜೋಡಿ!
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತದಲ್ಲಿ ಮತದಾನವಾಗಲಿದ್ದು, ಮುಂದಿನ ತಿಂಗಳ 10ರಂದು ಫಲಿತಾಂಶ ಬಹಿರಂಗೊಳ್ಳಲಿದೆ.