ETV Bharat / bharat

ಯುಪಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು - bjp core committee meet

UP Cabinet Expansion ದೀಪಾವಳಿ ಹಬ್ಬ ಹಾಗೂ 2024ರ ಲೋಕಸಭೆ ಚುನಾವಣೆಗೂ ಮುನ್ನ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಪ್ಲಾನ್​ ಮಾಡಿದೆ.

up-cabinet-expansion-before-diwali-2023-or-lok-sabha-election-2024
ಯುಪಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು
author img

By ETV Bharat Karnataka Team

Published : Nov 1, 2023, 10:51 PM IST

ಲಖನೌ (ಉತ್ತರ ಪ್ರದೇಶ): ದೀಪಾವಳಿ ಹಬ್ಬಕ್ಕೂ ಮುನ್ನ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ಆರಂಭವಾಗಿದೆ. ಈಗಾಗಲೇ ಖಾಲಿ ಇರುವ ಆರು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ನಿರೀಕ್ಷೆ ಇದೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ಕುತೂಹಲ ಹಾಗೂ ಚಟುವಟಿಕೆಗಳು ಗರಿಗೆದರಿವೆ.

ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಆಡಳಿತಾರೂಢ ಬಿಜೆಪಿ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಕೈ ಹಾಕಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸಂಪುಟದಲ್ಲಿ ಒಟ್ಟು 60 ಸಚಿವ ಸ್ಥಾನಗಳು ಭರ್ತಿ ಮಾಡಲು ಅವಕಾಶ. ಸದ್ಯ 54 ಸಚಿವ ಸ್ಥಾನಗಳು ಭರ್ತಿ ಇದ್ದು, ಆರು ಸ್ಥಾನಗಳು ಖಾಲಿ ಇವೆ. ಈ ನಿಟ್ಟಿನಲ್ಲಿ ಈ ಸ್ಥಾನಗಳನ್ನು ತುಂಬಲು ಯೋಜಿಸಲಾಗಿದೆ.

ದೆಹಲಿಯಲ್ಲಿ ಸಿಎಂ ಹಾಗೂ ಟೀಂ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಸಂಜೆ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ನಡೆದಿದೆ. ಇದೇ ಸಭೆಯಲ್ಲಿ, ಲೋಕಸಭೆ ಉತ್ತರ ಪ್ರದೇಶದ ಸಚಿವ ಸಂಪುಟ ವಿಸ್ತರಣೆ ವಿಷಯ ಚರ್ಚೆಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಸ್ಥಾನ ಪ್ರವಾಸದ ನಂತರ ನೇರವಾಗಿ ದೆಹಲಿಗೆ ತೆರಳಿದ್ದಾರೆ. ಜೊತೆಗೆ ಇಬ್ಬರೂ ಉಪಮುಖ್ಯಮಂತ್ರಿಗಳು, ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್ ಚೌಧರಿ, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಸಿಂಗ್ ಸೇರಿ ಹಲವು ಪ್ರಮುಖ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ಯಾರಿಗೆ ಸಚಿವಗಿರಿ ನಿರೀಕ್ಷೆ?: ಸಂಪುಟ ವಿಸ್ತರಣೆಯಲ್ಲಿ ಓಂ ಪ್ರಕಾಶ್ ರಾಜ್‌ಭರ್, ಧಾರಾ ಸಿಂಗ್ ಚೌಹಾಣ್ ಅವರಿಗೆ ಸ್ಥಾನ ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ. ಸುಹೇಲ್‌ದೇವ್​ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷರಾದ ಓಂಪ್ರಕಾಶ್ ರಾಜ್‌ಭರ್ ಗಾಜಿಪುರ ಜಿಲ್ಲೆಯ ಜಹರಾಬಾದ್ ಕ್ಷೇತ್ರದ ಶಾಸಕರಾಗಿದ್ದಾರೆ. 2022ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಆದರೆ, ಈಗ ಬಿಜೆಪಿ ಮೈತ್ರಿಕೂಟವನ್ನು ಓಂ ಪ್ರಕಾಶ್ ರಾಜ್‌ಭರ್ ಸೇರಿಸಿದ್ದಾರೆ. 2024ರ ಲೋಕಸಭೆ ಚುನಾವಣೆಯ ಮುನ್ನ ಅವರನ್ನು ಮಂತ್ರಿ ಮಾಡಲು ಬಿಜೆಪಿ ಯೋಜಿಸಿದೆ.

ಮತ್ತೊಬ್ಬ ನಾಯಕ ಧಾರಾ ಸಿಂಗ್ ಚೌಹಾಣ್ ಅವರಿಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಮೌ ಜಿಲ್ಲೆಯ ಘೋಸಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದಿದ್ದರು. ಆದರೆ, 2022ರ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿ ಮತ್ತೊಮ್ಮೆ ಆಯ್ಕೆಯಾಗಿದ್ದರು. ಮೂರು ತಿಂಗಳ ಹಿಂದೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಅವರು ಮರಳಿದ್ದಾರೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಘೋಸಿ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಈ ಸೋಲಿನ ಹೊರತಾಗಿಯೂ ಹಿಂದುಳಿದ ಸಮಾಜದ ಮೇಲೆ ಉತ್ತಮ ಹಿಡಿತ ಹೊಂದಿರುವ ಧಾರಾ ಸಿಂಗ್ ಅವರಿಗೆ ಮಣೆ ಹಾಕುವ ಚರ್ಚೆಗಳು ನಡೆಯುತ್ತಿವೆ.

ಧಾರಾ ಸಿಂಗ್​ ಅವರನ್ನು ಸಚಿವರನ್ನಾಗಿ ಮಾಡಿದ ಎಂಎಲ್​ಸಿ ಆಗಿಯೂ ಆಯ್ಕೆ ಮಾಡಬೇಕಾಗುತ್ತದೆ. ಮತ್ತೊಂದೆಡೆ, ಪದೇ ಪದೇ ಸಂಘಟನೆ ತೊರೆಯುತ್ತಿರುವ ಅವರಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ ನೀಡುವ ಬಗ್ಗೆ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ. ಮತ್ತೊಂದೆಡೆ, ರಾಂಪುರದ ಬಿಜೆಪಿ ಶಾಸಕ ಆಕಾಶ್ ಸಕ್ಸೇನಾ ಹೆಸರು ಕೂಡ ಸಚಿವ ಸ್ಥಾನದ ಮುನ್ನೆಲೆಗೆ ಬಂದಿದೆ. ಅಜಂ ಖಾನ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಎಲ್ಲ ಪ್ರಕರಣಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಆಕಾಶ್ ಹೋರಾಟ ನಡೆಸಿದ್ದಾರೆ. ರಾಂಪುರ ಉಪಚುನಾವಣೆಯಲ್ಲೂ ಅವರು ಪ್ರಬಲ ಗೆಲುವು ದಾಖಲಿಸಿದ್ದಾರೆ. ಅವರನ್ನು ಸಚಿವರನ್ನಾಗಿ ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕರ ಪತ್ನಿ 24 ಗಂಟೆಗಳ ನಂತರ ಪತ್ತೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.