ETV Bharat / bharat

ಆರ್​ಎಸ್​ಎಸ್​ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಯೋಗಿ ಅದಿತ್ಯನಾಥ್​ - ಆರ್​ಎಸ್​ಎಸ್​ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಯೋಗಿ ಅದಿತ್ಯನಾಥ್​

UP CM Yogi Adityanath meets RSS chief Mohan Bhagwat: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕಾರ ಮಾಡುವ ಮುನ್ನ ಆರ್​ಎಸ್​ಎಸ್​ ಮುಖ್ಯಸ್ಥ ಭಾಗವತ್​ ಅವರನ್ನು ಭೇಟಿಯಾಗಿದ್ದಾರೆ.

ಆರ್​ಎಸ್​ಎಸ್​ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಯೋಗಿ ಅದಿತ್ಯನಾಥ್​

author img

By

Published : Mar 20, 2022, 5:01 PM IST

ಗೋರಖ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಸಂಜೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಗೋರಖ್‌ಪುರದಲ್ಲಿರುವ ಆರ್‌ಎಸ್‌ಎಸ್‌ನ ಪ್ರಾಂತೀಯ ಕಚೇರಿ ಮಾಧವ್ ಧಾಮ್‌ನಲ್ಲಿ ಭೇಟಿಯಾಗಿ, ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕಾರ ಮಾಡುವ ಮುನ್ನ ಈ ಸಭೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25 ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಉಪನ್ಯಾಸಕನ​ ಪ್ರೇಮ ಪುರಾಣ.. ಹಳೆ ಲವರ್​ ಸುಸೈಡ್​, ಮದುವೆ ಮಂಟಪದಲ್ಲಿ ವಧುವೂ ಆತ್ಮಹತ್ಯೆ ಯತ್ನ!

ಆರ್‌ಎಸ್‌ಎಸ್ ಮುಖ್ಯಸ್ಥರು ಮಾರ್ಚ್ 20, 21 ಮತ್ತು 22 ರಂದು ಗೋರಖ್‌ಪುರದಲ್ಲಿ ಇರಲಿದ್ದಾರೆ. ಆರ್‌ಎಸ್‌ಎಸ್ ಮುಖ್ಯಸ್ಥರು ಗೋರಕ್ಷಾ ಪ್ರಾಂತ್ಯದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು 'ಕುಟುಂಬ ತರಬೇತಿ' ಕಾರ್ಯಕ್ರಮದಲ್ಲಿ ಸ್ವಯಂಸೇವಕರ ಕುಟುಂಬಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ದಿನಗಳ ಈ ಭೇಟಿಯ ವೇಳೆ ಭಾಗವತ್ ಅವರು ಆರ್‌ಎಸ್‌ಎಸ್ ಕಾರ್ಯಕರ್ತರ ಕೆಲಸವನ್ನು ಪರಿಶೀಲಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.