ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗವರ್ನರ್ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾದ ಅವರು ರಾಜೀನಾಮೆ ಪತ್ರ ಸಲ್ಲಿಸಿದರು.
2017ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಯೋಗಿ ಆದಿತ್ಯನಾಥ್ ಐದು ವರ್ಷಗಳ ಕಾಲ ಸಿಎಂ ಆಗಿದ್ದರು. 2022ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂದಿನ ಕೆಲ ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ನೂತನ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಇದರ ಬೆನ್ನಲ್ಲೇ ಸಚಿವರೊಂದಿಗೆ ಕೊನೆಯ ಕ್ಯಾಬಿನೆಟ್ ಸಭೆ ನಡೆಸಿದ ಯೋಗಿ ತದನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಪಕ್ಷ ಗೆಲ್ಲಿಸಿ ಚುನಾವಣೆಯಲ್ಲಿ ಸೋತ ಸಿಎಂ ಧಾಮಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ