ವಾರಾಣಸಿ : ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Chief Minister Yogi Adityanath) ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ (Kashi Vishwanath Temple) ನಿನ್ನೆ (ನ.14 ರಂದು) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಅನ್ನಪೂರ್ಣ ದೇವಿಯ 'ಶೋಭಾ ಯಾತ್ರೆ' (Goddess Annapurna 'Shobha Yatra' ) ಹಿನ್ನೆಲೆ ಇಲ್ಲಿಗೆ ಆಗಮಿಸಿದ್ದು, ಇಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ಇದೇ ವೇಳೆ ತಿಳಿಸಿದರು.
108 ವರ್ಷಗಳ ಹಿಂದೆ ಕೆನಡಾದಲ್ಲಿ ಪತ್ತೆಯಾದ ವಿಗ್ರಹವನ್ನು ಮರಳಿ ಭಾರತ ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ. ಈ ಹಿನ್ನೆಲೆ ಪ್ರಧಾನ ಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಇದೇ ವೇಳೆ ತಿಳಿಸಿದರು. ನಂತರ ಮುಖ್ಯಮಂತ್ರಿಗಳು ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ (Kashi Vishwanath Corridor project) ಪ್ರಗತಿ ಪರಿಶೀಲಿಸಿದರು.