ETV Bharat / bharat

ಆರ್ಥಿಕ ಸಂಕಷ್ಟ: ಫೇಸ್​ಬುಕ್​ ಲೈವ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ - ಪತ್ನಿ ಸಾವು! - ಫೇಸ್​ಬುಕ್​ ಲೈವ್​ನಲ್ಲಿ ಆತ್ಮಹತ್ಯೆಗೆ ಯತ್ನ

ಉತ್ತರ ಪ್ರದೇಶದ ಬಾಗ್‌ಪತ್ ವ್ಯಾಪಾರಿಯೊಬ್ಬರು ತಮ್ಮ ಪತ್ನಿಯೊಂದಿಗೆ ಫೇಸ್‌ಬುಕ್‌ನಲ್ಲಿ ಲೈವ್​ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತ್ನಿ ಸಾವನ್ನಪ್ಪಿದ್ದು, ಪತಿ ಐಸಿಯುನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

UP couple attempt suicide on FB live, wife dies
ಆತ್ಮಹತ್ಯೆಗೆ ಯತ್ನಿಸಿದ ಉತ್ತರ ಪ್ರದೇಶದ ದಂಪತಿ
author img

By

Published : Feb 9, 2022, 8:07 PM IST

ಬಾಗ್‌ಪತ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾಗ್‌ಪತ್​ನ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪತ್ನಿ ಸಾವನ್ನಪ್ಪಿದ್ದಾರೆ. ಪತಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಉತ್ತರ ಪ್ರದೇಶದ ಬಾಗ್‌ಪತ್ ವ್ಯಾಪಾರಿಯೊಬ್ಬರು ತಮ್ಮ ಪತ್ನಿಯೊಂದಿಗೆ ಫೇಸ್‌ಬುಕ್‌ನಲ್ಲಿ ಲೈವ್​ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷದಂತಹ ಪದಾರ್ಥ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಇಬ್ಬರನ್ನೂ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿ ಸಾವನ್ನಪ್ಪಿದ್ದು, ಪತಿ ಐಸಿಯುನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಈ ದಂಪತಿ ಡಿಮಾನಿಟೈಸೇಷನ್ ಮತ್ತು ಜಿಎಸ್‌ಟಿಯಿಂದ ನಮ್ಮ ಜೀವನ ತತ್ತರವಾಯಿತು ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ಕಳೆದ ಹಲವು ಸಮಯದಿಂದ ಇವರ ಪಾದರಕ್ಷೆ ವ್ಯಾಪಾರ ಸರಿಯಾಗಿ ನಡೆಯುತ್ತಿರಲಿಲ್ಲ ಮತ್ತು ಆರ್ಥಿಕ ಸ್ಥಿತಿ ಹದಗೆಟ್ಟಿತ್ತು.

ಖಾಸಿಂಪುರ ಗ್ರಾಮದ ನಿವಾಸಿ ರಾಜೀವ್ ತೋಮರ್ ಹೋಲ್​ಸೇಲ್​ ಶೂ ವ್ಯಾಪಾರ ಮಾಡುತ್ತಿದ್ದರು. ಉತ್ತರ ಪ್ರದೇಶದ ಬಾಗ್‌ಪತ್‌ನ ಸುಭಾಷ್ ನಗರ ಪ್ರದೇಶದಲ್ಲಿ ಇವರ ಅಂಗಡಿ ಇದ್ದು, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಇದೀಗ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಾಜೀವ್ ತೋಮರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪತ್ನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಷಯ ತಿಳಿದ ಆತನ ಸಂಬಂಧಿಕರು ದಂಪತಿಯನ್ನು ಕೂಡಲೇ ನಗರದ ಆಸ್ಪತ್ರೆಗೆ ಕರೆದೊಯ್ದಿದ್ದರು. ಪತ್ನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನೂ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ: ಮದುವೆಗೆ ಹೊರಟವರು ಮಸಣಕ್ಕೆ: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ ಮೂವರು ಮಹಿಳೆಯರ ಸಾವು

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.