ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶ ಸರ್ಕಾರವು ತನ್ನ ಮೊದಲ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ವಾರಾಣಸಿಯಲ್ಲಿ ನಿರ್ಮಿಸಲು ಯೋಜಿಸಿದೆ. ರಾಜ್ಯ ಆಯುಷ್ ಇಲಾಖೆಯು ಈ ಕುರಿತು ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು, ಕರಡನ್ನು ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಚೌಬೆಪುರ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಜಾಗ ಗುರುತಿಸಲಾಗಿದೆ ಎಂದು ಆಯುಷ್ ಇಲಾಖೆ ರಾಜ್ಯ ಸಚಿವ ದಯಾಶಂಕರ್ ಮಿಶ್ರಾ ದಯಾಳು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದಲ್ಲಿ 12,500 ಆಯುಷ್ ಕ್ಷೇಮ ಕೇಂದ್ರಗಳನ್ನು ತೆರೆಯುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದ್ದು, 2025ರ ವೇಳೆಗೆ 1,600 ಕೇಂದ್ರಗಳನ್ನು ತೆರೆಯಲು ಸಿದ್ಧತೆ ನಡೆಸಿದೆ. ಇದರಲ್ಲಿ ಈಗಾಗಲೇ 500 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಾರಾಣಸಿ, ಅಮೇಥಿ, ಕಾನ್ಪುರ ದೇಹತ್, ಕಾನ್ಪುರ ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 50 ಹಾಸಿಗೆಗಳ 9 ಆಸ್ಪತ್ರೆಗಳನ್ನು ತಮ್ಮ ಇಲಾಖೆ ಆರಂಭಿಸಿದೆ. ಇವುಗಳು ಯುಪಿಯಲ್ಲಿರುವ ಸಮಗ್ರ ಆಸ್ಪತ್ರೆಗಳಾಗಿದ್ದು, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ ವಿಧಾನಗಳಿಂದ ಚಿಕಿತ್ಸೆಯನ್ನು ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: ಇವಿಎಂ ಬಳಕೆ ತಡೆ ಕೋರಿದ್ದ ಅರ್ಜಿ ಸುಪ್ರೀಂಕೋರ್ಟ್ನಿಂದ ವಜಾ