ಬರೇಲಿ(ಉತ್ತರ ಪ್ರದೇಶ): ತ್ರಿವಳಿ ತಲಾಖ್ ಕಾನೂನು ರದ್ದುಗೊಂಡಿರುವ ಹೊರತಾಗಿ ಕೂಡ ಅನೇಕ ಪ್ರಕರಣಗಳು ಬೆಳಕಿಗೆ ಬರ್ತಿದ್ದು, ಇದೀಗ ಉತ್ತರ ಪ್ರದೇಶದ ಬರೇಲಿಯಲ್ಲಿ ಇಂತಹದ್ದೊಂದು ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಹೀಗಾಗಿ, ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಬೀದಿಗೆ ಬಿದ್ದಿದ್ದಾಳೆ.
ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆಗೆ ತ್ರಿವಳಿ ತಲಾಖ್ ನೀಡಿರುವ ಗಂಡ, ಮನೆಯಿಂದ ಹೊರ ಹಾಕಿದ್ದಾನೆ. ಏಪ್ರಿಲ್ 18ರಂದು ಈ ಘಟನೆ ನಡೆದಿದ್ದು, ಇತ್ತೀಚೆಗೆ ಬೆಳಕಿಗೆ ಬಂದಿದೆ. ಯುವತಿಗೆ ತಲಾಖ್ ನೀಡಲಾಗಿದೆ ಎಂಬುದನ್ನ ಸಾಬೀತುಪಡಿಸಲು ಅತ್ತೆ ದರ್ಗಾದಿಂದ ಫತ್ವಾ ಸಹ ತಂದಿದ್ದಾಳೆ ಎಂಬ ಆರೋಪ ಮಾಡಿದ್ದಾನೆ.
ಮಹಿಳೆ ನೀಡಿರುವ ಮಾಹಿತಿ ಪ್ರಕಾರ, 1995ರಲ್ಲಿ ಅಯೂಬ್ ಎಂಬಾತನೊಂದಿಗೆ ಮದುವೆ ಮಾಡಿಕೊಂಡಿದ್ದಳಂತೆ. ಬರೇಲಿಯ ಬರದರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಮದುವೆಯಾದಾಗಿನಿಂದಲೂ ಪತಿ ಮದ್ಯ ಸೇವಿಸಿ, ತನ್ನ ಮೇಲೆ ಹಲ್ಲೆ ನಡೆಸುತ್ತಿದ್ದಾನೆ. ಜೊತೆಗೆ ಮನೆ ಖರ್ಚಿಗೆ ಹಣ ನೀಡುತ್ತಿಲ್ಲ. ಹೀಗಾಗಿ, ತಾನು ಖಾಸಗಿ ಆಸ್ಪತ್ರೆಯಲ್ಲಿ ಕೆಲಸಕ್ಕಾಗಿ ಸೇರಿಕೊಂಡಿದ್ದೇನೆ.
ಏಪ್ರಿಲ್ 18ರಂದು ಕೆಲಸದಿಂದ ವಾಪಸ್ ಬಂದ ಬಳಿಕ ನನಗೆ ತ್ರಿವಳಿ ತಲಾಖ್ ನೀಡಿ, ಮನೆಯಿಂದ ಹೊರಹಾಕಿದ್ದಾನೆ. ಇದೀಗ ನಾಲ್ವರು ಮಕ್ಕಳೊಂದಿಗೆ ಬೀದಿಗೆ ಬಂದಿರುವೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬರದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗಂಡನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮಹಿಳೆ ದೂರಿನ ಆಧಾರದ ಮೇಲೆ ಪತಿ ಹಾಗೂ ಅತ್ತೆ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.