ETV Bharat / bharat

ಅತ್ಯಾಚಾರಕ್ಕೆ ವಿರೋಧ: 15ರ ಬಾಲೆ ಮೇಲೆ ಮಾರಣಾಂತಿಕ ಹಲ್ಲೆ, ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಪ್ರಕೃತಿ ಕರೆಗೆ ಮನೆಯಿಂದ ಹೊರಗಡೆ ಹೋಗಿದ್ದ 15 ವರ್ಷದ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

UP News
UP News
author img

By

Published : Sep 11, 2021, 5:56 PM IST

ಬಸ್ತಿ( ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಬಾಲಕಿ ಪ್ರಕೃತಿ ಕರೆಗೆ ಹೋಗಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಕೆಲ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನ ನಡೆಸಿದ್ದು, ಈ ವೇಳೆ ವಿರೋಧ ವ್ಯಕ್ತಪಡಿಸಿದಾಗ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ಉತ್ತರ ಪ್ರದೇಶದ ಕಪ್ತಂಗಂಜ್​​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಿಂದ ಕೇವಲ 55 ಮೀಟರ್ ದೂರದಲ್ಲಿ ಬಾಲಕಿ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಪ್ರಕೃತಿ ಕರೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ರಾತ್ರಿ 10 ಗಂಟೆಗೆ ಹೊರಹೋಗಿದ್ದಳು. ತುಂಬಾ ಸಮಯವಾದರೂ ಆಕೆಗೆ ವಾಪಸ್​ ಬರದ ಕಾರಣ ಮನೆಯವರು ಹುಡುಕಾಟದಲ್ಲಿ ಮಗ್ನರಾಗಿದ್ದಾರೆ. ಬೆಳಗಿನ ಜಾವ 5 ಗಂಟೆಗೆ ಆಕೆ ಸಿಕ್ಕಿದ್ದಾಳೆ. ಈ ವೇಳೆ ಅರೆಬೆತ್ತಲಾಗಿದ್ದಳು ಮತ್ತು ಬಾಯಿಯಲ್ಲಿ ಬ್ಲೇಡ್​ ಹಾಕಲಾಗಿತ್ತು ಎನ್ನಲಾಗಿದ್ದು, ದೇಹದ ಕೆಲವೊಂದು ಭಾಗಗಳಲ್ಲಿ ಬ್ಲೇಡ್​ನಿಂದ ಕತ್ತರಿಸಿರುವ ಗುರುತು ಪತ್ತೆಯಾಗಿವೆ.

ಘಟನಾ ಸ್ಥಳಕ್ಕೆ ಕಪ್ತಂಗಂಜ್​ ಪೊಲೀಸರು ಭೇಟಿ ನೀಡಿ, ಬಾಲಕಿಯನ್ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ. ಇದಾದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಆಶಿಶ್​ ಶ್ರೀವಾಸ್ತವ್​, ಬಾಲಕಿಗೆ ಪ್ರಜ್ಞೆ ಬಂದ ಬಳಿಕವೇ ಸತ್ಯಾಂಶ ಹೊರಬರಲಿದೆ. ಇದೀಗ ಸಂತ್ತಸ್ತೆಯ ಸಹೋದರ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ರೇಪ್​​..47 ವರ್ಷದ ಆರೋಪಿಗೆ 20ವರ್ಷ ಜೈಲು ಶಿಕ್ಷೆ

ಪ್ರಾಥಮಿಕ ಮಾಹಿತಿ ಪ್ರಕಾರ, ಬಾಲಕಿ ರಾತ್ರಿ ಮನೆಯಿಂದ ಹೊರಗಡೆ ಹೋಗುತ್ತಿದ್ದಂತೆ ಕೆಲ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ವಿರೋಧ ವ್ಯಕ್ತಪಡಿಸಿದಾಗ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.