ಬರೇಲಿ (ಉತ್ತರ ಪ್ರದೇಶ): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ತಲೆ ಕಡಿಯುತ್ತೇನೆ ಎಂದು ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಬರೇಲಿಯಲ್ಲಿ ಬಂಧಿಸಲಾಗಿದೆ. ಆರೋಪಿಯು ಶರ್ಮಾ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ವಿಡಿಯೋವನ್ನು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗಿತ್ತು.
ನಾಸಿರ್ ಹುಸೇನ್ ಬಂಧಿತ ಆರೋಪಿ. ಈತನನ್ನು ಆನ್‌ಲೈನ್‌ನಲ್ಲಿ ಬೆದರಿಕೆ ಹಾಕಿದ್ದಕ್ಕಾಗಿ ಮತ್ತು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಪ್ರಯತ್ನಿಸಿದ್ದಕ್ಕಾಗಿ ಬಂಧಿಸಿದ್ದೇವೆ. ಆರೋಪಿಯನ್ನು ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ಸಾವಾನ್ ಪ್ರದೇಶದ ಅವರ ಮನೆಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ಕುಮಾರ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ವಿಷಯದಲ್ಲಿ ಯಾರೂ ಭಾಗಿಯಾಗದಂತೆ ನೋಡಿಕೊಳ್ಳಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಪೊಲೀಸರಿಗೆ ನಿರ್ದೇಶನ ನೀಡಿದ ಕೆಲವು ದಿನಗಳ ನಂತರ ಈತನ ಬಂಧನವಾಗಿದೆ.
ಇದನ್ನೂ ಓದಿ : ಸಂಪುಟ ವಿಸ್ತರಣೆ ವಿಳಂಬಕ್ಕೆ ಶಾಸಕ ರೇಣುಕಾಚಾರ್ಯ ಅಸಮಾಧಾನ