ಗೊಂಡಾ(ಉತ್ತರ ಪ್ರದೇಶ): ಶುಕ್ರವಾರ ತಡರಾತ್ರಿ ದಲಿತ ಯುವತಿಯೋರ್ವಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಈ ಪ್ರಕರಣ ನಡೆದಿದೆ.
ಶುಕ್ರವಾರ ರಾತ್ರಿ ಯುವತಿ ಮೇಲೆ ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು ತದನಂತರ ಆಕೆಯ ಕೊಲೆ ಮಾಡಿದ್ದು, ಊರ ಹೊರಗಡೆ ಮೃತದೇಹ ಎಸೆದಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ, ಪ್ರಕರಣ ದಾಖಲು ಮಾಡಿಕೊಂಡಿದ್ದರು. ಆರೋಪಿಗಳ ಸುಳಿವು ನೀಡಿದವರಿಗೆ 25 ಸಾವಿರ ರೂ. ಬಹುಮಾನ ನೀಡುವುದಾಗಿ ಘೋಷಣೆ ಸಹ ಮಾಡಿದ್ದರು. ತನಿಖೆ ಆರಂಭಿಸಿದ ಐದು ಗಂಟೆಯೊಳಗೆ ಆರೋಪಿ ಬಂಧನ ಮಾಡಲಾಗಿದೆ.
ಇದನ್ನೂ ಓದಿರಿ: 216 ಅಡಿ ಎತ್ತರದ ರಾಮಾನುಜರ ಪ್ರತಿಮೆ ಅನಾವರಣ... ಯಜ್ಞದಲ್ಲಿ ಭಾಗಿಯಾಗಿರೋದು ನನ್ನ ಪುಣ್ಯ ಎಂದ ನಮೋ
ನವಾಬ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೋರ್ವ ಆರೋಪಿಗೋಸ್ಕರ ಶೋಧಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಮಿಶ್ರಾ ತಿಳಿಸಿದ್ದಾರೆ.