ETV Bharat / bharat

ವಿಕಾಸ್ ದುಬೆ ಎನ್​ಕೌಂಟರ್ ಪ್ರಕರಣದಲ್ಲಿ ಯುಪಿ ಪೊಲೀಸರಿಗೆ ‘ಕ್ಲೀನ್ ಚಿಟ್’ - gangster vikas dubey encounter case

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಮತ್ತು ಆತನ ಐವರು ಸಹಚರರ ಎನ್‌ಕೌಂಟರ್ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ರಚಿಸಿದ ನ್ಯಾಯಮೂರ್ತಿ ಬಿ.ಎಸ್.ಚೌಹಾಣ್​ ನೇತೃತ್ವದ ಸಮಿತಿಯು ಯುಪಿ ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದೆ.

up police gets clean chit in gangster vikas dubey encounter case
ವಿಕಾಸ್ ದುಬೆ ಎನ್​ಕೌಂಟರ್ ಪ್ರಕರಣದಲ್ಲಿ ಯುಪಿ ಪೊಲೀಸರಿಗೆ ‘ಕ್ಲೀನ್ ಚಿಟ್’
author img

By

Published : Apr 21, 2021, 9:29 AM IST

ಕಾನ್ಪುರ (ಉತ್ತರ ಪ್ರದೇಶ): ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಮತ್ತು ಆತನ ಐವರು ಸಹಚರರ ಎನ್‌ಕೌಂಟರ್ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ನ್ಯಾ.ಬಿ.ಎಸ್.ಚೌಹಾಣ್​ ವಿಚಾರಣಾ ಆಯೋಗ ಕ್ಲೀನ್‌ ಚಿಟ್ ನೀಡಿದೆ.

ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರೆನ್ನಲು ಸೂಕ್ತವಾದ ಪುರಾವೆಗಳಿಲ್ಲ. ಎರಡು ತಿಂಗಳ ಕಾಲ ನಡೆದ ವಿಚಾರಣೆ ಸಮಯದಲ್ಲಿ ಎನ್‌ಕೌಂಟರ್ ನಕಲಿ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿಲ್ಲ ಎಂದು ಆಯೋಗ ಹೇಳಿದೆ.

ಇದನ್ನೂ ಓದಿ: ಮೋಸ್ಟ್ ವಾಂಟೆಡ್ ವಿಕಾಸ್ ದುಬೆ ಹೆಸರು ಕಾನ್ಪುರದ 'ಟಾಪ್ 15' ಅಪರಾಧಿಗಳ ಪಟ್ಟಿಯಲ್ಲೇ ಇಲ್ಲ!

ಜುಲೈ 2, 2020 ರ ರಾತ್ರಿ, ಚೌಬೆಪುರ ಪೊಲೀಸ್ ಠಾಣೆ ಪ್ರದೇಶದ ಬಿಕಾರು ಗ್ರಾಮದ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡದ ಮೇಲೆ ವಿಕಾಸ್ ದುಬೆ ಮತ್ತು ಆತನ ಸಹಚರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 8 ಪೊಲೀಸರು ಹತರಾಗಿದ್ದರು. ನಂತರ, ಆತನ ನಾಲ್ವರು ಸಹಚರರನ್ನು ಪೊಲೀಸರು ಸದೆಬಡಿದರು. ಈ ಸಂದರ್ಭದಲ್ಲಿ ಮುಖ್ಯ ಆರೋಪಿ ವಿಕಾಸ್ ದುಬೆ ಪರಾರಿಯಾಗಿದ್ದ.

ಜುಲೈ 9, 2020 ರಂದು ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಆತನನ್ನು ಮಧ್ಯಪ್ರದೇಶ ಪೊಲೀಸರು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ: ಎನ್​ಕೌಂಟರ್​ನಲ್ಲಿ ಬಲಿಯಾದ ವಿಕಾಸ್ ದುಬೆ ಕ್ರಿಮಿನಲ್ ಇತಿಹಾಸ ಭಯಾನಕ..!

ಆರೋಪಿಯನ್ನು ಕಾನ್ಪುರಕ್ಕೆ ಕರೆತರುವ ವೇಳೆ ಪೊಲೀಸರ ಬೆಂಗಾವಲು ವಾಹನ ಮಗುಚಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ನಡುವೆ ಪರಾರಿಯಾಗಲು ಯತ್ನಿಸಿದ ವಿಕಾಸ್‌ ದುಬೆ ಎನ್‌ಕೌಂಟರ್‌ನಿಂದ ಸಾವನ್ನಪ್ಪಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಹೇಳಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.