ಮೀರತ್ (ಉತ್ತರ ಪ್ರದೇಶ): ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಕಾರ್ಖಾನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿಸಿದ್ದಾರೆ.
ಮೀರತ್ನಲ್ಲಿರುವ ಎರಡು ಕಾರ್ಖಾನೆಗಳ ಮೇಲೆ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಎಂಟು ಜನರನ್ನು ಬಂಧಿಸಿ ಕಾರ್ಖಾನೆಯಲ್ಲಿದ್ದ ಸುಮಾರು 133 ಶಸ್ತ್ರಾಸ್ತ್ರಗಳು ಸೇರಿದಂತೆ ಒಂದು ನಾಡ ಬಂದೂಕನ್ನು ವಶಕ್ಕೆ ಪಡೆದಿದ್ದಾರೆ.
ಓದಿ: ತಂದೆಯ ಜೊತೆ ವಿಷ ಸೇವಿಸಿದ ಪುತ್ರಿಯರು: ಇಬ್ಬರು ಸಾವು
ಇನ್ನು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾದ ಎಸ್‌ಟಿಎಫ್ ಮತ್ತು ಸ್ಥಳೀಯ ಪೊಲೀಸರ ತಂಡಕ್ಕೆ 2 ಲಕ್ಷ ರೂ.ಗಳನ್ನು ಬಹುಮಾನವಾಗಿ ನೀಡಲಾಗಿದೆ ಎಂದು ಮೀರತ್ನ ಎಸ್‌ಎಸ್‌ಪಿ ಅಜಯ್ ಕುಮಾರ್ ಸಾಹ್ನಿ ತಿಳಿಸಿದ್ದಾರೆ.