ETV Bharat / bharat

ಮೂರಂತಸ್ತಿನ ಕಟ್ಟಡ ಕುಸಿದ ಮೂವರ ದುರ್ಮರಣ.. ಅವಶೇಷದಡಿ ಹಲವರು ಸಿಲುಕಿರುವ ಶಂಕೆ

author img

By

Published : Jan 24, 2023, 9:20 PM IST

Updated : Jan 24, 2023, 10:04 PM IST

ಮೂರು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ಮಂಗಳವಾರ ಸಂಜೆ ನಡೆದಿದೆ.

building collapsed in lucknow
ಮೂರು ಅಂತಸ್ತಿನ ಕಟ್ಟಡ ಕುಸಿದ ಮೂವರ ದುರ್ಮರಣ

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ. ಕಟ್ಟಡದ ಅವಶೇಷಗಳಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ ಇಂದು ದೆಹಲಿ ಸುತ್ತ-ಮುತ್ತಲು ಸಂಭವಿಸಿದ ಭೂಕಂಪದಿಂದಾಗಿ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಇಲ್ಲಿನ ಹಜರತ್‌ಗಂಜ್‌ನ ವಜೀರ್ ಹಸನ್ ರಸ್ತೆ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಅಪಾರ್ಟ್‌ಮೆಂಟ್​ ಕಟ್ಟಡ ಕುಸಿತದ ವಿಷಯ ತಿಳಿದ ಕೂಡಲೇ ಜಿಲ್ಲಾಡಳಿತ, ಪೊಲೀಸ್ ಆಡಳಿತ ಹಾಗೂ ಇತರೆ ಸಂಸ್ಥೆಗಳು ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯ ಆರಂಭಿಸಿವೆ. ಏಳು ಕುಟುಂಬಗಳು ಈ ಅಪಾರ್ಟ್‌ಮೆಂಟ್‌ನ ನೆಲ ಮಹಡಿಯಲ್ಲಿ ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ. ಇದೇ ವೇಳೆ 15ರಿಂದ 20 ಮಂದಿ ಸಿಲುಕಿಕೊಂಡಿದ್ದಾರೆ ಎಂಬ ವರದಿಯಾಗಿದೆ.

ಇದುವರೆಗೆ ಅವಶೇಷಗಳಡಿ ಸಿಲುಕಿದ್ದ ಎಂಟು ಮಂದಿಯನ್ನು ಹೊರತಂದು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ತಂಡವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಸದ್ಯದ ಮಾಹಿತಿ ಪ್ರಕಾರ ಕಟ್ಟಡದ ನೆಲಮಾಳಿಗೆಯಲ್ಲಿ ಹಲವು ದಿನಗಳಿಂದ ಕಾಮಗಾರಿ ನಡೆಯುತ್ತಿತ್ತು. ಹಲವು ಬಾರಿ ಸದ್ದು ಕೂಡ ಕೇಳಿ ಬಂದಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಟ್ಟಡ ಕುಸಿಯುತ್ತಿದ್ದಂತೆ ಯಾರೊಬ್ಬರಿಗೂ ಹೊರಗೆ ಬರಲು ಸಾಧ್ಯವಾಗಿಲ್ಲ ಎಂದೂ ಹೇಳಲಾಗಿದೆ. ಪರಿಣಾಮ ಮೂವರು ಮೃತಪಟ್ಟಿದ್ದರೆ, ಮತ್ತೊಂದೆಡೆ ಇತರ ನಿವಾಸಿಗಳು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಇತ್ತ, ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್​, ನಗರಾಭಿವೃದ್ಧಿ ಮತ್ತು ಇಂಧನ ಸಚಿವ ಎ.ಕೆ.ಶರ್ಮಾ, ವಿಭಾಗೀಯ ಆಯುಕ್ತ ರೋಷನ್ ಜೇಕಬ್, ಮುಖ್ಯಮಂತ್ರಿಗಳ ಸಲಹೆಗಾರ ಅವ್ನಿಶ್ ಅವಸ್ತಿ, ಲಖನೌ ಮಹಾನಗರ ಪಾಲಿಕೆ ಆಯುಕ್ತ ಇಂದ್ರಜಿತ್ ಸಿಂಗ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತೊಂದೆಡೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಯೋಗಿ ಹಾರೈಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಕಂಪಿಸಿದ ಭೂಮಿ: ನೇಪಾಳದಲ್ಲಿ ಕಂಪನದ ಕೇಂದ್ರ ಬಿಂದು

ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವ: ಇಂದು ಮಧ್ಯಾಹ್ನ ದೆಹಲಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿತ್ತು. ಕನಿಷ್ಠ 15 ಸೆಕೆಂಡುಗಳ ಕಾಲ ಭೂಕಂಪನ ಸಂಭವಿಸಿದ್ದು, ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರ ಓಡಿ ಬಂದಿದ್ದರು. ಈ ಕಂಪನದ ತೀವ್ರತೆಯು ರಿಕ್ಟರ್​ ಮಾಪಕದಲ್ಲಿ 5.8ರಷ್ಟು ದಾಖಲಾಗಿತ್ತು.

ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ನೇಪಾಳ ಭೂಕಂಪದ ಕೇಂದ್ರಬಿಂದುವಾಗಿದ್ದು, ಮಧ್ಯಾಹ್ನ 2.28ರ ಸುಮಾರಿಗೆ ಭೂಕಂಪನದ ಅನುಭವ ಉಂಟಾಗಿತ್ತು. ಆದರೆ, ಯಾವುದೇ ಹಾನಿಯ ಬಗ್ಗೆ ವರದಿ ಆಗಿರಲಿಲ್ಲ. ಈ ಬಗ್ಗೆ ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಬಲವಾದ ನಡುಕದ ಅನುಭವದ ಬಗ್ಗೆ ಹೇಳಿಕೊಂಡಿದ್ದರು.

Last Updated : Jan 24, 2023, 10:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.