ETV Bharat / bharat

ಪತಿ ಮೇಲಿನ ದ್ವೇಷಕ್ಕೆ ಮಗುವನ್ನೇ ಕೊಂದು ಹಾಕಿದ ತಾಯಿ

ಮಗುವಿನ ಮೃತದೇಹದ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಅನುಮಾನದ ಆಧಾರದ ಮೇಲೆ ತಾಯಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

author img

By

Published : Nov 28, 2022, 12:14 PM IST

UP Woman kills baby to spite husband
ಪತಿ ಮೇಲಿನ ದ್ವೇಷ: ಮಗುವನ್ನೇ ಕೊಂದ ತಾಯಿ

ಬಿಜ್ನೋರ್(ಉತ್ತರ ಪ್ರದೇಶ): ತನ್ನ ಗಂಡನ ಮೇಲಿನ ಕೋಪಕ್ಕೆ ತನ್ನ ಒಂದೂವರೆ ವರ್ಷದ ಹೆಣ್ಣು ಮಗುವನ್ನೇ ಕತ್ತು ಹಿಸುಕಿ ಕೊಂದು ಹಾಕಿದ ಅಮಾನವೀಯ ಘಟನೆ ಬಿಜ್ನೋರ್ ಜಿಲ್ಲೆಯ ಔರಂಗಪುರದ ಭಿಕ್ಕು ಗ್ರಾಮದಲ್ಲಿ ನಡೆದಿದೆ. ಮಗುವಿನ ತಂದೆ ಅಂಕಿತ್ ಸಿಂಗ್ ಶನಿವಾರ ತಮ್ಮ ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾಳೆ ಎಂದು ಬಿಜ್ನೋರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸರು ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಯಲ್ಲಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಅನುಮಾನದ ಆಧಾರದ ಮೇಲೆ ಮಗುವಿನ ತಾಯಿ ಶಿವಾನಿ ರಾಣಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ತನ್ನ ಪತಿಯೊಂದಿಗೆ ತೀವ್ರ ವಾಗ್ವಾದದ ನಂತರ ಕೋಪದ ಭರದಲ್ಲಿ ಮಗುವನ್ನು ಕತ್ತು ಹಿಸುಕಿ ಕೊಂದಿರುವ ಸಂಗತಿಯನ್ನು ಆಕೆ ಒಪ್ಪಿಕೊಂಡಿದ್ದಾಳೆ.

ಅಂಕಿತ್ ಮತ್ತು ಶಿವಾನಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಗಳು ಹುಟ್ಟಿದ ನಂತರ ಆಗಾಗ್ಗೆ ಪರಸ್ಪರ ಜಗಳವಾಡುತ್ತಿದ್ದರು. ಆರೋಪಿ ತಾಯಿ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಿಜ್ನೋರ್ ಪೊಲೀಸ್ ಅಧೀಕ್ಷಕ ದಿನೇಶ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ದಾಯಾದಿಗಳ ಜಮೀನು ವಿವಾದ.. ಮಗಳಿಗೆ ಬೆಂಕಿ ಹಚ್ಚಿದ ಚಿಕ್ಕಮ್ಮ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.